ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಅಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ಪ್ರಣಬ್ ಮೊಹಾಂತಿ ಅವರು ಮುನ್ನಡೆಸುತ್ತಿದ್ದಾರೆ.
ಕೇಂದ್ರ ಸರ್ಕಾರದ ನೇಮಕಾತಿಗಳ ಸಂಪುಟ ಸಮಿತಿಯು ಈಚೆಗೆ ಸಭೆ ನಡೆಸಿದ್ದು, ವಿವಿಧ ರಾಜ್ಯಗಳಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಯ ಅರ್ಹರ ಪಟ್ಟಿಗೆ ಆಯ್ಕೆ ಮಾಡಿದೆ. ಸಿಬಿಐ, ಎನ್‌ಎಐ ಸೇರಿ ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳ ಮಹಾನಿರ್ದೇಶಕ ಹುದ್ದೆಗೆ ಈ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದೆ. ಈ ಪಟ್ಟಿಯಲ್ಲಿ 35 ಅಧಿಕಾರಿಗಳಿದ್ದು, ಕರ್ನಾಟಕದಿಂದ ಮೊಹಾಂತಿ ಮಾತ್ರ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.