ಬೆಂಗಳೂರು: ರಾಜೀವ್‌ಗಾಂಧಿ ರಾಷ್ಟ್ರೀಯ ಉದ್ಯಾನ ಹೆಸರು ತೆಗೆದು ನಾಗರಹೊಳೆ ರಾಷ್ಟ್ರೀಯ ಉದ್ಯಾನ ಎಂಬ ಹೆಸರು ಇಡಬೇಕು ಎಂಬುದಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಪತ್ರ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಆ ಪತ್ರವನ್ನು ಇನ್ನೂ ನೋಡಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಅಸ್ಸಾಂನಲ್ಲಿ ರಾಷ್ಟ್ರೀಯ ಉದ್ಯಾನಕ್ಕಿದ್ದ ರಾಜೀವ್‌ಗಾಂಧಿ ಹೆಸರನ್ನು ಕೈಬಿಟ್ಟ ಬೆನ್ನಲ್ಲೇ ಪ್ರತಾಪ್ ಸಿಂಗ್ ಈ ಬೇಡಿಕೆ ಇಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.