ADVERTISEMENT

ಸಿಟ್ಟು ಹೊರಹಾಕುವ ಹಕ್ಕು ಕಾರ್ಯಕರ್ತರಿಗಿದೆ: ಪ್ರತಾಪ ಸಿಂಹ

​ಪ್ರಜಾವಾಣಿ ವಾರ್ತೆ
Published 18 ಮೇ 2023, 20:05 IST
Last Updated 18 ಮೇ 2023, 20:05 IST
ಸಂಸದ ಪ್ರತಾಪ ಸಿಂಹ
ಸಂಸದ ಪ್ರತಾಪ ಸಿಂಹ   

ಬೆಂಗಳೂರು: ‘ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರ ಹಾಕುವ ಹಕ್ಕೂ ಇದೆ’ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಪಕ್ಷ ಸೋತಿರುವುದರಿಂದ ಅನಾಥವಾಗಿರುವುದು ಮತ್ತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ, ದಯವಿಟ್ಟು ನಮ್ಮನ್ನು ಕ್ಷಮಿಸಿ’ ಎಂದು ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದ್ದಾರೆ.

‘ಅದೇ ರೀತಿ ಯಾರದ್ದೋ ವೈಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೆ’ ಎಂದೂ ಮನವಿ ಮಾಡಿದ್ದಾರೆ.

ADVERTISEMENT

ಪುತ್ತೂರಿನಲ್ಲಿ ಇತ್ತೀಚೆಗೆ ನಳಿನ್‌ ಕುಮಾರ್‌ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡ ಭಾವಚಿತ್ರಗಳ ಮೇಲೆ ಚಪ್ಪಲಿ ಹಾರ ಹಾಕಿದ ದೂರಿನ ಹಿನ್ನೆಲೆಯಲ್ಲಿ ಕೆಲವರನ್ನು ಬಂಧಿಸಿದ, ಪೊಲೀಸರು ಮನಬಂದಂತೆ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ ಸಿಂಹ ಟ್ವೀಟ್ ಮಾಡಿದ್ದಾರೆ ಎನ್ನಲಾಗಿದೆ.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.