ADVERTISEMENT

ಎಬಿವಿಪಿ ಕಾರ್ಯಕರ್ತರ ಭಾವನೆಗೆ ಪೂರಕವಾಗಿ ಸರ್ಕಾರದ ಚಿಂತನೆ: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 7:53 IST
Last Updated 30 ಜುಲೈ 2022, 7:53 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: ‘ಎಸ್‌ಡಿಪಿಐ, ಪಿಎಫ್‌ಐಯಂಥ ಸಂಘಟನೆಗಳನ್ನು ನಿಷೇಧಿಸುವಂತೆ ಬೇಡಿಕೆ ಇಟ್ಟಿರುವ ಎಬಿವಿಪಿ ಕಾರ್ಯಕರ್ತರ ಭಾವನೆಗಳನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಸರ್ಕಾರ ಕೂಡಾ ಆ ನಿಟ್ಟಿನಲ್ಲಿ ಯೋಚಿಸುತ್ತಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

ಎಬಿವಿಪಿ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ತಮ್ಮ ಸರ್ಕಾರಿ ನಿವಾಸದ ಮುಂಭಾಗದಲ್ಲಿ ನಡೆಸಿದ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಡಿ.ಜಿ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆಗಳಿಂದ ಹಿಡಿದು, ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯಂಥ ಘಟನೆಗಳ ಹಿನ್ನೆಲೆಯಲ್ಲಿ ಈ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ’ ಎಂದಿದ್ದಾರೆ.

‘ನನ್ನನ್ನು ಭೇಟಿಯಾಗಲು ನನಗೆ ಮನೆಗೆ ಬಂದಿದ್ದ ಎಬಿವಿಪಿ ಕಾರ್ಯಕರ್ತರು, ನನ್ನ ಅನುಪಸ್ಥಿತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಎಬಿವಿಪಿ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ‘ ಎಂದೂ ಅವರು ಹೇಳಿದ್ದಾರೆ.

ADVERTISEMENT

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.