ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ; ಕ್ರಮದ ಭರವಸೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 10:04 IST
Last Updated 27 ಜುಲೈ 2022, 10:04 IST
ಪ್ರವೀಣ್ ನೆಟ್ಟಾರು
ಪ್ರವೀಣ್ ನೆಟ್ಟಾರು   

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಜರಂಗದಳದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಹೇಳಿದರು.

ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ, ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಎಂದು ಸಂತಾಪ ಸೂಚಿಸಿದರು. \

ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಭರವಸೆ ನೀಡಿದರು.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಲ್ಲದೆ ಯಾವುದೇ ಅಹಿತಕರ ಘಟನೆ ಆಗದಂತೆ ಬೆಳ್ಳಾರೆ ಪೇಟೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಲೀಸರು ಬಿಗಿ ಬಂದೋಬಸ್ತ್‌ಗೆ ಕ್ರಮ ಕೈಗೊಂಡಿದ್ದಾರೆ.

ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದ ಅಪರಿಚಿತರು ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದು ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.