ADVERTISEMENT

ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಪ್ರವೀಣ್‌ ಸೂದ್ ನೇಮಕ

​ಪ್ರಜಾವಾಣಿ ವಾರ್ತೆ
Published 31 ಜನವರಿ 2020, 13:14 IST
Last Updated 31 ಜನವರಿ 2020, 13:14 IST
ಪ್ರವೀಣ್ ಸೂದ್
ಪ್ರವೀಣ್ ಸೂದ್   

ಬೆಂಗಳೂರು:ರಾಜ್ಯ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರವೀಣ್‌ ಸೂದ್ ಸದ್ಯ ಸಿಐಡಿ ವಿಭಾಗದ ಡಿಜಿಪಿ ಆಗಿದ್ದರು.ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಪ್ರವೀಣ್ ಸೂದ್ ಬಿ.ಟೆಕ್ ಪದವೀಧರು. ಬೆಂಗಳೂರು ಕಮಿಷನರ್ ಆಗಿಯೂ ಕೆಲಸ ಮಾಡಿದ್ದಾರೆ. ಶುಕ್ರವಾರ ರಾತ್ರಿಯೇ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ನೀಲಮಣಿ ಎನ್‌. ರಾಜು ಶುಕ್ರವಾರ ನಿವೃತ್ತರಾಗಿದ್ದು ಅವರ ಸ್ಥಾನಕ್ಕೆ ಪ್ರವೀಣ್‌ ಸೂದ್‌ ಅವರನ್ನು ನೇಮಕ ಮಾಡಲಾಗಿದೆ. ನೀಲಮಣಿ ರಾಜ್ಯದ ಮೊದಲ ಮಹಿಳಾ ಡಿಜಿಪಿ ಆಗಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ

ADVERTISEMENT

1986ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಪ್ರವೀಣ್‌ ಸೂದ್‌ ಅವರು 2022 ಮೇ ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ.

ಮೂವರಿಗೆ ಡಿಜಿಪಿಯಾಗಿ ಬಡ್ತಿ...

ಅಲೋಕ್‌ ಕುಮಾರ್‌, ಮೇಘರಿಕ್‌ ಮತ್ತು ಆರ್‌ಪಿ ಶರ್ಮಾ ಅವರಿಗೆ ಡಿಜಿಪಿಯಾಗಿ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.