ADVERTISEMENT

ಪೊಲೀಸರು ಕ್ವಾರಂಟೈನ್‌ನಲ್ಲಿದ್ದರೆ ಅದು ‘ಕರ್ತವ್ಯದ ಅವಧಿ’

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 19:15 IST
Last Updated 9 ಜೂನ್ 2020, 19:15 IST

ಬೆಂಗಳೂರು: ಕೊರೊನಾ ವಾರಿಯರ್ಸ್‌ ಆಗಿ ಕೆಲಸ ನಿರ್ವಹಿಸುವ ಪೊಲೀಸರು ಇನ್ನು ಮುಂದೆ ಕ್ವಾರಂಟೈನ್‌ಗೆ ಒಳಗಾದರೆ, ಆ ಅವಧಿಯನ್ನು ‘ಕರ್ತವ್ಯದ ಅವಧಿ’ ಎಂದು ಪರಿಗಣಿಸುವಂತೆ ಎಲ್ಲ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಪೊಲೀಸ್‌ ಕಮಿಷನರ್‌ಗಳು ಮತ್ತು ವಲಯಗಳ ಮಹಾ ನಿರೀಕ್ಷಕರಿಗೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶಿಸಿದ್ದಾರೆ.

ಸೋಂಕಿತರಿರುವ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ, ಸೋಂಕಿತರೊಂದಿಗೆ ಸಂಪರ್ಕಕ್ಕೆ ಬರುವ ಹಾಗೂ ನಿರಂತರವಾಗಿ ಸಾರ್ವಜನಿಕರ ಜೊತೆ ನಿಕಟ ಸಂಪರ್ಕಕ್ಕೆ ಬರುವ ಸಂದರ್ಭದಲ್ಲಿ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಲಭವಾಗಿ ಕೋವಿಡ್‌– 19 ಸೋಂಕಿಗೆ ತುತ್ತಾಗುವ ಸಾಧ್ಯತೆಗಳಿವೆ. ಈಗಾಗಲೇ ಕೆಲವು ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದಾರೆ. ಹೀಗೆ, ಸೋಂಕು ತಗುಲಿ ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾದ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.

ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ತರಬೇತಿಗಾಗಿ ಹೊರ ಜಿಲ್ಲೆಗಳಿಗೆ ಮತ್ತು ಹೊರರಾಜ್ಯಗಳಿಗೆ ತೆರಳಿ, ಅಲ್ಲಿ ಕ್ವಾರಂಟೈನ್‌ಗೆ ಒಳಗಾದ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗೂ ಈ ಆದೇಶ ಅನ್ವಯವಾಗುತ್ತದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.