ADVERTISEMENT

262 ಪೂರ್ವ ಪ್ರಾಥಮಿಕ ಶಾಲೆಗಳಿಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2023, 19:47 IST
Last Updated 22 ಆಗಸ್ಟ್ 2023, 19:47 IST
   

ಬೆಂಗಳೂರು: ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ಸೆಪ್ಟೆಂಬರ್‌ನಿಂದಲೇ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ (ಎಸ್‌ಎಸ್‌ಕೆ) ಸಮ್ಮತಿ ನೀಡಿದೆ.

ಕರ್ನಾಟಕ ಪಬ್ಲಿಕ್‌ ಶಾಲೆಗಳ (ಕೆಪಿಎಸ್) ಭಾಗವಾಗಿ 2019-20ರಿಂದಲೇ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ-ಯುಕೆಜಿ) ತರಗತಿಗಳನ್ನು ರಾಜ್ಯ ಸರ್ಕಾರ ಆರಂಭಿಸಿತ್ತು. ಪ್ರಸ್ತುತ ರಾಜ್ಯದಲ್ಲಿ 276 ಕೆಪಿಎಸ್‌ ಹಾಗೂ 664 ಪೂರ್ವ ಪ್ರಾಥಮಿಕ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಬೇಡಿಕೆ ಇದ್ದರೂ, ಕೋವಿಡ್‌ ಕಾರಣದಿಂದ ಮತ್ತೆ ಹೊಸದಾಗಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಅವಕಾಶ ನೀಡಿರಲಿಲ್ಲ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT