
ಬಿಜೆಪಿ
ಬೆಂಗಳೂರು: ಲೋಕಸಭೆಯಲ್ಲಿ ಬಿಜೆಪಿಗೆ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಿಸಿಕೊಡಬೇಕೆಂಬ ಹಟಕ್ಕೆ ಬಿದ್ದಿರುವ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ತಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಜತೆಗೂಡಿ ಚುನಾವಣಾ ತಾಲೀಮನ್ನು ಭರ್ಜರಿಯಾಗಿಯೇ ಆರಂಭಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡ ಬಳಿಕ ಕಳೆಗುಂದಿದ್ದ ಪಕ್ಷದಲ್ಲಿ ಹೊಸ ಹುರುಪು ತಂದಿರುವ ವಿಜಯೇಂದ್ರ, ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದಾರೆ. ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡು, ಪಕ್ಷದಲ್ಲಿ ವಿಶ್ವಾಸ ತುಂಬುವ ರೀತಿಯಲ್ಲಿ ತಮ್ಮ ನೇತೃತ್ವದ ಮೊದಲ ವಿಶೇಷ ರಾಜ್ಯ ಕಾರ್ಯಕಾರಿಣಿಯನ್ನು ಶನಿವಾರ ಅವರು ನಡೆಸಿದರು.
ಕೇಂದ್ರ ಸಚಿವರು, ಎಲ್ಲ ಹಂತದ ನಾಯಕರು ಸೇರಿದಂತೆ 900 ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. 28 ಕ್ಷೇತ್ರಗಳನ್ನು ಗೆಲ್ಲುವ ಕಾರ್ಯತಂತ್ರ, ಸಂಘಟನೆ ಹೇಗಿರಬೇಕು ಎಂಬ ಚರ್ಚೆಯೂ ಸಭೆಯಲ್ಲಿ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.