ADVERTISEMENT

ನವೆಂಬರ್‌ನಿಂದ ಪದವಿ ಕಾಲೇಜು ಆರಂಭಕ್ಕೆ ಸಿದ್ಧತೆ: ಡಾ.ಸಿ.ಎನ್.ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 20:32 IST
Last Updated 19 ಅಕ್ಟೋಬರ್ 2020, 20:32 IST
ಡಾ.ಸಿ.ಎನ್.ಅಶ್ವತ್ಥನಾರಾಯಣ
ಡಾ.ಸಿ.ಎನ್.ಅಶ್ವತ್ಥನಾರಾಯಣ   

ಮೈಸೂರು: ‘ನವೆಂಬರ್‌ನಿಂದ ಪದವಿ ತರಗತಿಗಳನ್ನು ಆರಂಭಿಸಲು ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಂಬಂಧಪಟ್ಟವರ ಜತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದುಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

‘ವಿದ್ಯಾರ್ಥಿಗಳು, ಬೋಧಕರು ಹಾಗೂ ಇತರ ಸಿಬ್ಬಂದಿಯ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ಕೊರೊನಾ ವೈರಸ್‌ ನಮ್ಮ ನಡುವೆಯೇ ಓಡಾಡಿಕೊಂಡಿದೆ. ಹೀಗಾಗಿ, ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭಿ
ಸುತ್ತೇವೆ. ಈ ವಿಷಯದಲ್ಲಿ ಆತುರ ಸಲ್ಲ’ ಎಂದು ಸೋಮವಾರ ಇಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT