ಕಲಬುರ್ಗಿ: ‘ಮಹಾರಾಷ್ಟ್ರ ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಈಗಾಗಲೇ ಸಂಬಂಧಿಸಿದ ರಾಜ್ಯಗಳಿಗೂ ಪತ್ರ ಬರೆಯಲಾಗಿದ್ದು, ಅಲ್ಲಿಂದ ಒಪ್ಪಿಗೆ ಬಂದರೆ ಸಂಚಾರ ಆರಂಭಿಸಲಾಗುವುದು’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
‘ರಾಜ್ಯದೊಳಗೆ ಎ.ಸಿ ಸ್ಲೀಪರ್ ಕೋಚ್ ಬಸ್‌ಗಳ ಟಿಕೆಟ್ ಬುಕಿಂಗ್ ಆರಂಭಿಸಲಾಗಿದೆ’ ಎಂದು ಸೋಮ
ವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಮುಂದಿನ ಮೂರು ತಿಂಗಳಲ್ಲಿ 4,000 ಹೊಸ್ ಬಸ್‌ಗಳನ್ನು ಖರೀದಿಸಿ, ಸಾರಿಗೆ ನಿಗಮಗಳಿಗೆ ನೀಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.