ಬೆಳಗಾವಿ: ಕೆಎಲ್‌ಇ ಸಂಸ್ಥೆಯು ನಗರದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ (ಜನವರಿ 3) ಮಧ್ಯಾಹ್ನ 4ಕ್ಕೆ ಉದ್ಘಾಟಿಸುವರು.
‘ಸುಮಾರು ₹300 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲಾಗಿದೆ. ಉತ್ತರ ಕರ್ನಾಟಕ, ಗೋವಾ, ಮಹಾರಾಷ್ಟ್ರ ಭಾಗದ ರೋಗಿಗಳಿಗೆ ಅನುಕೂಲ ಆಗಲಿದೆ’ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ.
ಡಿಸೆಂಬರ್ 30ರಂದೇ ಈ ಆಸ್ಪತ್ರೆ ಉದ್ಘಾಟನೆ ದಿನಾಂಕ ನಿಗದಿಯಾಗಿತ್ತು. ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಕಾರಣ ಮುಂದೂಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.