ADVERTISEMENT

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಸುತ್ತೂರು ಶ್ರೀ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 13:39 IST
Last Updated 11 ಸೆಪ್ಟೆಂಬರ್ 2025, 13:39 IST
   

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಚಿತ್ರ ಹಾಗೂ ಮಾಹಿತಿ ಹಂಚಿಕೊಂಡಿದ್ದಾರೆ.

'ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಶ್ರೀ ಸುತ್ತೂರು ಮಹಾಸಂಸ್ಥಾನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳೊಂದಿಗೆ ಗೌರವಪೂರ್ವಕವಾಗಿ ಭೇಟಿ ಮಾಡಲಾಯಿತು. ಪರಮಪೂಜ್ಯರೊಂದಿಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದು ನನ್ನ ಸುಯೋಗ ಎಂದೇ ಭಾವಿಸಿದ್ದೇನೆ' ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.