ADVERTISEMENT

ಜೂನ್‌ 13ರಂದು ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಆಗಮನ

​ಪ್ರಜಾವಾಣಿ ವಾರ್ತೆ
Published 6 ಜೂನ್ 2022, 16:40 IST
Last Updated 6 ಜೂನ್ 2022, 16:40 IST
ರಾಮನಾಥ ಕೋವಿಂದ್‌
ರಾಮನಾಥ ಕೋವಿಂದ್‌   

ಬೆಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಜೂನ್‌ 13 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಜೂನ್‌ 13 ರಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸುವ ರಾಷ್ಟ್ರಪತಿ, ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಆ ದಿನ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡುವರು.

ಇಸ್ಕಾನ್‌ ಸಂಸ್ಥೆಯು ಕನಕಪುರ ರಸ್ತೆ ಸಮೀಪದ ದೊಡ್ಡಕಲ್ಲಸಂದ್ರದ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ಮಾದರಿಯಲ್ಲಿ ನಿರ್ಮಿಸಿರುವ ದೇಗುಲವನ್ನು ಜೂನ್‌ 14 ರಂದು ಬೆಳಿಗ್ಗೆ ಉದ್ಘಾಟಿಸುವರು. ಆ ದಿನ ಮಧ್ಯಾಹ್ನ ದೆಹಲಿಗೆ ವಾಪಸಾಗುವರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.