ADVERTISEMENT

ರಾಷ್ಟ್ರಪತಿ ಚುನಾವಣೆ: ಕರ್ನಾಟಕದಲ್ಲಿ ಸಂಪೂರ್ಣ ಮತದಾನ

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 6:34 IST
Last Updated 19 ಜುಲೈ 2022, 6:34 IST
   

ಬೆಂಗಳೂರು:ನೂತನ ರಾಷ್ಟ್ರಪತಿ ಆಯ್ಕೆಗಾಗಿ ಸೋಮವಾರ ನಡೆದ ಚುನಾವಣೆಯಲ್ಲಿ ರಾಜ್ಯದ ಎಲ್ಲ ಶಾಸಕರೂ ಮತ ಚಲಾಯಿಸಿದರು. ಸಂಸದರಾದ ವಿ. ಶ್ರೀನಿವಾಸ ಪ್ರಸಾದ್‌, ಎಚ್‌.ಡಿ. ದೇವೇಗೌಡ ಕೂಡ ಬೆಂಗಳೂರಿನಲ್ಲಿಯೇ ಹಕ್ಕು ಚಲಾಯಿಸಿದ್ದು, ಒಟ್ಟು 226 ಮತಗಳ ಚಲಾವಣೆಯಾಗಿದೆ.

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮೊದಲಿಗರಾಗಿ ಮತ ಚಲಾವಣೆ ಮಾಡಿದರು. ಬಳಿಕ ಉಳಿದ ಶಾಸಕರು ಸರದಿಯೋಪಾದಿಯಲ್ಲಿ ಬಂದು ಮತ ಚಲಾಯಿಸಿದರು. ನಿಗದಿತ ಅವಧಿಗೂ ಮೊದಲೇ ಎಲ್ಲರೂ ಮತದಾನ ಮಾಡಿದರು. ರಾತ್ರಿ 9.20ಕ್ಕೆ ವಿಮಾನದ ಮೂಲಕ ಮತಪೆಟ್ಟಿಗೆಯನ್ನು ದೆಹಲಿಗೆ ಕೊಂಡೊಯ್ಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.