ADVERTISEMENT

‘ಎಲ್ಲ ಶಾಲೆಗಳಲ್ಲಿ ಎಲ್‌ಕೆಜಿ ಆರಂಭಿಸಿ’

​ಪ್ರಜಾವಾಣಿ ವಾರ್ತೆ
Published 31 ಮೇ 2019, 20:23 IST
Last Updated 31 ಮೇ 2019, 20:23 IST

ಬೆಂಗಳೂರು: ‘ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲೂ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಿಸಬೇಕು’ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆಗ್ರಹಿಸಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ, ‘ಕಳೆದ ಮೂರು ವರ್ಷಗಳಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆದಿಲ್ಲ. ಮೂರು ವರ್ಷಗಳ ಒಟ್ಟು ಶೇಕಡಾವಾರು ಪರಿಗಣಿಸಿ ವರ್ಗಾವಣೆ ಪ್ರಕ್ರಿಯೆ ಆರಂಭಿಸಬೇಕು’ ಎಂದು ಆಗ್ರಹಿಸಿದರು.

‘6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸ್ಸಿನ ಅನ್ವಯ ಮುಖ್ಯ ಗುರುಗಳಿಗೆ 10, 15, 20, 25, 30 ವರ್ಷದ ಬಡ್ತಿಗಳನ್ನು ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೇಶಕ ಹುದ್ದೆಯ ವರೆಗೂ ಬಡ್ತಿ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘2014ಕ್ಕಿಂತ ಮೊದಲು ನೇಮಕ ವಾದ ಪ್ರಾಥಮಿಕ ಶಿಕ್ಷಕರುಒಂದರಿಂದ ಐದನೇ ತರಗತಿ ಮಕ್ಕಳಿಗೆ ಮಾತ್ರ ಬೋಧನೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ. ಇದನ್ನು ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.