ADVERTISEMENT

ಪ್ರತಿಭಟನೆ ಕೈಬಿಟ್ಟ ವಿದ್ಯುತ್ ನೌಕರರು

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 17:40 IST
Last Updated 9 ಆಗಸ್ಟ್ 2021, 17:40 IST

ಬೆಂಗಳೂರು: ‘ವಿದ್ಯುಚ್ಛಕ್ತಿ ಕಾಯ್ದೆ (ತಿದ್ದುಪಡಿ) ಮಸೂದೆ-2021 ವಿರೋಧಿಸಿ ಆ.10ರಂದು ಹಮ್ಮಿಕೊಂಡಿದ್ದ ವಿದ್ಯುತ್ ನೌಕರರು ಹಾಗೂ ಅಧಿಕಾರಿಗಳಿಂದ ಕರ್ತವ್ಯ ಬಹಿಷ್ಕಾರ ಪ್ರತಿಭಟನೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ’ ಎಂದುಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ನೌಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಟಿ.ಆರ್.ರಾಮಕೃಷ್ಣಯ್ಯ ತಿಳಿಸಿದರು.

‘ಸಂಸತ್‌ನಲ್ಲಿ ಮಸೂದೆ ಮಂಡನೆಯಾಗುವ ಸೂಚನೆ ಇದ್ದಿದ್ದರಿಂದ ಪ್ರತಿಭಟಿಸಲು ತೀರ್ಮಾನಿಸಿದ್ದೆವು. ಆದರೆ, ಸದ್ಯ ಮಸೂದೆ ಮಂಡನೆ ಆಗುವುದಿಲ್ಲ ಎಂಬ ಮಾಹಿತಿ ಇದೆ. ರಾಜ್ಯ ಮತ್ತು ಕೇಂದ್ರ ಸಚಿವರೂ ಸ್ಪಷ್ಟಪಡಿಸಿದ್ದಾರೆ’ ಎಂದರು.

‘ಒಂದು ವೇಳೆ ಮಸೂದೆ ಮಂಡನೆಯಾಗುವ ಸುಳಿವು ಸಿಕ್ಕರೆ, ನಿಗಮದ ನೌಕರರೆಲ್ಲ ತಕ್ಷಣವೇ ಪ್ರತಿಭಟನೆ ನಡೆಸಲಿದ್ದೇವೆ’ ಎಂದೂ ಅವರು ಎಚ್ಚರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.