ADVERTISEMENT

ರಾಜ್ಯದ ಎಲ್ಲ ಎಟಿಎಂ‌ಗಳಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಲಿ: ಎಚ್.ಡಿ. ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 11:09 IST
Last Updated 21 ಮಾರ್ಚ್ 2020, 11:09 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ತಡೆಗೆ ರಾಜ್ಯದ ಎಟಿಎಂಗಳಲ್ಲಿಯೂ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ದುರಾದೃಷ್ಟವಶಾತ್ ಕೊರೊನಾ ಸೋಂಕಿತರು ಎಟಿಎಂಗಳಲ್ಲಿ ಹಣ ಡ್ರಾ ಮಾಡಿದರೆ ಅಮಾಯಕರು ಕೊರೊನಾಗೆ ಬಲಿ ಆಗುವ ಸಾಧ್ಯತೆಗಳಿವೆ. ಎಲ್ಲ ಬ್ಯಾಂಕುಗಳು ತುರ್ತಾಗಿ ಎಟಿಎಂಗಳಲ್ಲಿ ಸಮರೋಪಾದಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಹೇಳಿದ್ದಾರೆ.

ರಾಜ್ಯದ ಯಾವುದೇ ಎಟಿಎಂನಲ್ಲೂ ಸುರಕ್ಷೆ ಇಲ್ಲ. ದಿನನಿತ್ಯ ಹಣ ಡ್ರಾ ಮಾಡಲು ನೂರಾರು ಗ್ರಾಹಕರು ಎಟಿಎಂಗಳಿಗೆ ಬರುತ್ತಾರೆ. ಕೊರೊನಾ ವೈರಸ್‌ ಬಗ್ಗೆ ಮುಂಜಾಗ್ರತಾ ಕ್ರಮವನ್ನು ತಕ್ಷಣವೇ ತೆಗೆದುಕೊಳ್ಳಬೇಕು.
ಪ್ರತಿ ಎಟಿಎಂ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಕಡ್ಡಾಯವಾಗಿ ಇಡಲು ತುರ್ತು ಕ್ರಮ ಕೈಗೊಳ್ಳ ಬೇಕು ಎಂದು ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.