ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6,7ನೇ ತರಗತಿಗೂ ಬೋಧಿಸಲು ಅವಕಾಶ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 19:16 IST
Last Updated 9 ಡಿಸೆಂಬರ್ 2025, 19:16 IST
<div class="paragraphs"><p>ಶಿಕ್ಷಕ</p></div>

ಶಿಕ್ಷಕ

   

– ಗೆಟ್ಟಿ ಚಿತ್ರ

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ 5ನೇ ತರಗತಿವರೆಗೆ ಬೋಧಿಸುತ್ತಿರುವ ಶಿಕ್ಷಕರಿಗೆ 6 ಮತ್ತು 7ನೇ ತರಗತಿಗೂ ಬೋಧಿಸಲು ಅವಕಾಶ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.

ಎನ್‌ಸಿಟಿಇ ಮಾರ್ಗಸೂಚಿ ಪ್ರಕಾರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಸೂಚಿಸಿದ ಹಾಗೆ ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿರುವ ಶಿಕ್ಷಕರು 6,7ನೇ ತರಗತಿಗೆ ಬೋಧಿಸಲು ಅರ್ಹರಾಗಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಈ ಸಂಬಂಧ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಲಾಗಿದೆ. ಸಾರ್ವಜನಿಕರಿಂದ ಬಂದ ಆಕ್ಷೇಪಣೆ, ಸಲಹೆಗಳನ್ನು ಪರಿಗಣಿಸಿ, ಅಂತಿಮ ಆದೇಶ ಹೊರಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.