ADVERTISEMENT

ಅನಂತಕುಮಾರ್‌ಗೆ ಮೋದಿ ಅಂತಿಮ ನಮನ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2018, 20:17 IST
Last Updated 12 ನವೆಂಬರ್ 2018, 20:17 IST
ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಅನಂತ್‌ಕುಮಾರ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಅನಂತ್‌ಕುಮಾರ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮ ಸಲ್ಲಿಸಿದರು.    

ಬೆಂಗಳೂರು: ಇಂದು(ಸೋಮವಾರ)ಬೆಳಿಗ್ಗೆ ನಿಧನರಾದ ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಎನ್. ಅನಂತಕುಮಾರ್(59) ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪ ನಮನ ಸಲ್ಲಿಸಿದರು.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ನಗರದ ಎಚ್‌ಎಎಲ್‌ ವಿಮಾನನಿಲ್ದಾಣಕ್ಕೆ ರಾತ್ರಿಬಂದಿಳಿದ ಮೋದಿ ಅವರು ಅನಂತಕುಮಾರ್‌ ಅವರ ನಿವಾಸಕ್ಕೆ ತೆರಳಿ ದರ್ಶನ ಪಡೆದರು.

ಬಳಿಕ, ಮೋದಿ ಅನಂತಕುಮಾರ್‌ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ADVERTISEMENT

ವಿಮಾನನಿಲ್ದಾಣದಲ್ಲಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ ಮತ್ತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬರಮಾಡಿಕೊಂಡರು.

ವಿಮಾನನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸ್ವಾಗತಿಸಿದರು. –ಪ್ರಜಾವಾಣಿ ಚಿತ್ರ

ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಅನಂತ್‌ಕುಮಾರ್‌ ಇಂದು(ಸೋಮವಾರ) ನಸುಕಿನ 3 ಗಂಟೆಗೆ ನಿಧನರಾದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.