ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜನ್ನು ಉದ್ಘಾಟಿಸಿದರು.
ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು ಬರಮಾಡಿಕೊಂಡರು.
ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜು ಹಾಗೂ ಸತ್ಯಸಾಯಿ ರಾಜೇಶ್ವರಿ ಭವನವನ್ನು ಉದ್ಘಾಟಿಸಿದರು.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದಲೇ ಆಶ್ರಮದಲ್ಲಿ ಚಟುವಟಿಕೆಗಳು ಗರಿಗೆದರಿದ್ದವು. ಕಳೆದ ವರ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ಒಂದೇ ವರ್ಷದಲ್ಲಿ ಭವ್ಯವಾದ ಕಟ್ಟಡ ತಲೆ ಎತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.