ADVERTISEMENT

ಭ್ರಷ್ಟಾಚಾರ, ಬೆಲೆ ಏರಿಕೆ: ಬಹಿರಂಗ ಚರ್ಚೆಗೆ ಬಿಜೆಪಿಗೆ ಸಿದ್ದರಾಮಯ್ಯ ಸವಾಲು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 12:54 IST
Last Updated 20 ಏಪ್ರಿಲ್ 2022, 12:54 IST
ಸಿದ್ದರಾಮಯ್ಯ (ಪ್ರಜಾವಾಣಿ ಸಂಗ್ರಹ ಚಿತ್ರ)
ಸಿದ್ದರಾಮಯ್ಯ (ಪ್ರಜಾವಾಣಿ ಸಂಗ್ರಹ ಚಿತ್ರ)   

ಮೈಸೂರು: ಭ್ರಷ್ಟಾಚಾರ ಆರೋಪಗಳು, ಬೆಲೆ ಏರಿಕೆ ಕುರಿತು ತಾಕತ್ತಿದ್ದರೆ, ಧಮ್ ಇದ್ದರೆ ಬಿಜೆಪಿ ಅವರು ಒಂದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲೆಸೆದರು.

ಸ್ವತಂತ್ರ ಭಾರತದಲ್ಲಿ ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬಂದಿರಲಿಲ್ಲ. ಜನಸಾಮಾನ್ಯರ ಬದುಕು ಅಸಹನೀಯವಾಗಿದೆ. ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಕೋಮುವಾದವನ್ನು ಮುನ್ನೆಲೆಗೆ ತರುವ, ಶಾಂತಿ ಕದಡುವ, ಹಿಂದೂ ಮುಸ್ಲಿಮರು ಕ್ರೈಸ್ತರ ನಡುವೆ ದ್ವೇಷ ಹಚ್ಚಿ ಸಮಾಜ ಒಡೆಯುತ್ತಿದೆ ಎಂದು ಆರೋಪಿಸಿದರು.

ಕೆ.ಎಸ್.ಈಶ್ವರಪ್ಪ ಅವರನ್ನು ಏಕೆ ಬಂಧಿಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಕೇಳುತ್ತಾರೆ. ಅವರನ್ನು ಬಂಧಿಸದೇ ಕುಮಾರಸ್ವಾಮಿ ಅವರವ್ವೇ ಬಂಧಿಸಬೇಕಾ?ಎಂದು ಪ್ರಶ್ನಿಸಿದರು.

ADVERTISEMENT

ತಮ್ಮ ಭಾಷಣದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು ಭ್ರಷ್ಟಾಚಾರಕ್ಕೆ ಶಿಫಾರಸು ಮಾಡುವ ಪ್ರಧಾನಿ ಮೋದಿ ಎಂದು ವಾಗ್ದಾಳಿ ನಡೆಸಿದರು.

ದೇಶ ಮತ್ತು ರಾಜ್ಯ ಉಳಿಸಲು ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಮಹಾತ್ಮಗಾಂಧಿ ಚೌಕದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಕಾಲ್ನಡಿಗೆಯಲ್ಲಿಯೆ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.