ADVERTISEMENT

ಕಾರಾಗೃಹಗಳ ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 19:14 IST
Last Updated 11 ಜೂನ್ 2021, 19:14 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ರಾಜ್ಯದಾದ್ಯಂತ ಕಾರಾಗೃಹಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ಎಲ್ಲಾ ಹುದ್ದೆಗಳನ್ನು ಮೂರು ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕಾರಾಗೃಹಗಳ 114 ವೈದ್ಯಕೀಯ ಹುದ್ದೆಗಳಲ್ಲಿ 86 ಹುದ್ದೆಗಳು ಖಾಲಿ ಇವೆ. ಹುದ್ದೆಗಳ ಭರ್ತಿ ಸಂಬಂಧ ಕ್ರಮ ಕೈಗೊಳ್ಳಲು ಮೂರು ತಿಂಗಳ ಸಮಯಾವಕಾಶ ಬೇಕು ಎಂದು ಸರ್ಕಾರ ಕೋರಿತು.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಕಾರಾಗೃಹಗಳಲ್ಲಿನ ಸಂದರ್ಶಕರ ಕೊಠಡಿಗಳಲ್ಲಿನ ಸೌಲಭ್ಯಗಳ ಕುರಿತು ತಪಾಸಣೆ ನಡೆಸಲು ದಿಢೀರ್ ಭೇಟಿ ನೀಡಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಿಗೆ ಸೂಚನೆ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.