ಬೆಂಗಳೂರು: ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೊರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
‘ತಲೆ ತೆಗೆಯಿರಿ, ತೊಡೆ ಮುರಿಯಿರಿ ಎನ್ನುತ್ತಿರುವ ಬಿಜೆಪಿ ನಾಯಕರು ತಮ್ಮ ಮಕ್ಕಳ ಕೈಗೆ ದೊಣ್ಣೆ, ಲಾಂಗು ಮಚ್ಚುಗಳನ್ನು ಕೊಟ್ಟು ಬೀದಿಗೆ ಬಿಡುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.
ಬಡವರ ಮನೆ ಮಕ್ಕಳನ್ನು ಬಾವಿಗೆ ತಳ್ಳಿ ರಾಜಕೀಯದ ಆಳ ನೋಡುವ ಬದಲು ತಮ್ಮ ಮಕ್ಕಳ ಹೆಗಲಿಗೆ ಕೇಸರಿ ಶಾಲು, ಕೈಗೆ ದೊಣ್ಣೆ ಮಚ್ಚು ಕೊಟ್ಟು ಧರ್ಮ ರಕ್ಷಣೆಯ ಕೈಂಕರ್ಯಕ್ಕೆ ಬಿಡಬೇಕು ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರು ಧರ್ಮರಕ್ಷಣೆಯ ಬೋಧನೆ, ಪ್ರಚೋದನೆಗಳನ್ನು ತಮ್ಮ ಮನೆಯಿಂದಲೇ ಶುರು ಮಾಡಲಿ, ತಮ್ಮ ಮಕ್ಕಳಿಗೆ ತ್ರಿಶೂಲ ದೀಕ್ಷೆ ಕೊಡಲಿ, ಕೈಗೆ ದೊಣ್ಣೆ ಕೊಡಲಿ ಎಂದಿದ್ದಾರೆ.
ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕು ಎಂಬ ಆರ್‌ಎಸ್‌ಎಸ್ ಫರ್ಮಾನು ಅನ್ನು ಯಾವ ಬಿಜೆಪಿಗರು ಪಾಲನೆ ಮಾಡಲು ಮುಂದಾಗಿದ್ದಾರೆ? ಮಕ್ಕಳು ಹೆರುವುದರ ಹೊರೆಯೂ ಬಡವರಿಗೆ ಮಾತ್ರವೇ? ಬಿಜೆಪಿಗರಿಗೂ ಅನ್ವಯಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
ಅಮಾಯಕ ಹಿಂದೂ ಕಾರ್ಯಕರ್ತರು ಬಿಜೆಪಿ ನಾಯಕರೆದುರು ತಲೆ ತೆಗೆಯುವ ಕೆಲಸಕ್ಕೆ ನಿಮ್ಮ ಮಕ್ಕಳು ಮುಂದಿರಲಿ, ನಾವು ಅವರ ಹಿಂದೆ ಇರುತ್ತೇವೆ ಎಂಬ ಒಂದೇ ಒಂದು ಬೇಡಿಕೆ ಮುಂದಿಡಲಿ. ಆಗ ಬಿಜೆಪಿ ನಾಯಕರ ಅಸಲಿತ ಬಂಡವಾಳವನ್ನು ಕಾಣಬಹುದು ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.