ADVERTISEMENT

ಪ್ರಿಯಾಂಕ್‌ ಪಾಪದ ಕೊಡ ತುಂಬಿದೆ: ಬಿಜೆಪಿಯ ಎನ್. ರವಿಕುಮಾರ್ ಟೀಕೆ

​ಪ್ರಜಾವಾಣಿ ವಾರ್ತೆ
Published 23 ಮೇ 2025, 9:03 IST
Last Updated 23 ಮೇ 2025, 9:03 IST
<div class="paragraphs"><p>ಎನ್. ರವಿಕುಮಾರ್, ಪ್ರಿಯಾಂಕ್ ಖರ್ಗೆ</p></div>

ಎನ್. ರವಿಕುಮಾರ್, ಪ್ರಿಯಾಂಕ್ ಖರ್ಗೆ

   

ಕಲಬುರಗಿ: ‘ಕಲಬುರಗಿ ಜಿಲ್ಲೆಯಲ್ಲಿ ಪ್ರಿಯಾಂಕ್‌ ಖರ್ಗೆ ಸರ್ವಾಧಿಕಾರಿಯಾಗಿ ಮೆರೆಯುತ್ತಿದ್ದಾರೆ. ಅವರ ಪಾಪದ ಕೊಡ ತುಂಬಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎನ್‌.ರವಿಕುಮಾರ್‌ ಟೀಕಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿರೋಧ ಪಕ್ಷದ ನಾಯಕ ಸ್ಥಾನ ಸಾಂವಿಧಾನಿಕ ಹುದ್ದೆ. ಅಂಥ ಸ್ಥಾನದಲ್ಲಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರ ಅತಿಥಿಗೃಹದಲ್ಲಿ ಐದಾರು ಗಂಟೆ ದಿಗ್ಬಂಧನದಲ್ಲಿ ಇರಿಸಿದ್ದು ಖಂಡನೀಯ’ ಎಂದರು.

ADVERTISEMENT

‘ದಿಗ್ಬಂಧನ ಖಂಡಿಸಿ ಹಾಗೂ ಮೂರು ಪ್ರಮುಖ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶನಿವಾರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಿಗ್ಗೆ 10.30ಕ್ಕೆ ಧರಣಿ ಸತ್ಯಾಗ್ರಹ ಮಾಡುತ್ತೇವೆ’ ಎಂದು ರವಿಕುಮಾರ್‌ ಹೇಳಿದರು.

‘ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಸಿ.ಟಿ.ರವಿ ಹಾಗೂ ಹತ್ತಾರು ಶಾಸಕರು, ಮುಖಂಡರು ಪಾಲ್ಗೊಳ್ಳುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.