ADVERTISEMENT

ಜ್ಞಾನಪೀಠ, ಭಾರತ ರತ್ನ ಪುರಸ್ಕೃತರ ಹುಟ್ಟೂರಿಗೆ ತಲಾ ₹1 ಕೋಟಿ ಅನುದಾನ: ಪ್ರಿಯಾಂಕ್

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2025, 23:30 IST
Last Updated 1 ನವೆಂಬರ್ 2025, 23:30 IST
<div class="paragraphs"><p>ಪ್ರಿಯಾಂಕ್ ಖರ್ಗೆ</p></div>

ಪ್ರಿಯಾಂಕ್ ಖರ್ಗೆ

   

ಕಲಬುರಗಿ: ‘ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ, ಕನ್ನಡದ  ಮಹನೀಯರ ಹುಟ್ಟೂರಿನ‌ ಅಭಿವೃದ್ಧಿಗಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ತಲಾ‌ ₹ 1 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದು ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಶನಿವಾರ ಇಲ್ಲಿ ಘೋಷಣೆ ಮಾಡಿದರು.

‘ಜ್ಞಾನಪೀಠ ಪುರಸ್ಕೃತರಾದ ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ.ಗೋಕಾಕ, ಯು.ಆರ್‌.ಅನಂತಮೂರ್ತಿ, ಗಿರೀಶ್‌ ಕಾರ್ನಾಡ್‌, ಚಂದ್ರಶೇಖರ ಕಂಬಾರ ಹಾಗೂ ‘ಭಾರತ ರತ್ನ’ ಪ್ರಶಸ್ತಿ ಪುರಸ್ಕೃತರಾದ ಸರ್‌ ಎಂ.ವಿಶ್ವೇಶ್ವರಯ್ಯ, ಭೀಮಸೇನ ಜೋಶಿ ಅವರ ಹುಟ್ಟೂರುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ. ಸಿ.ಎನ್‌.ಆರ್‌. ರಾವ್‌ ಅವರ ಹುಟ್ಟೂರು ಬೆಂಗಳೂರು ಆಗಿದ್ದು,. ನಗರ ಪ್ರದೇಶ ಆದ್ದರಿಂದ ಐಟಿ ಬಿಟಿ ಇಲಾಖೆಯಿಂದ ಅನುದಾನ ನೀಡಲಾಗುವುದು ಎಂದರು.

ADVERTISEMENT

‘ಸ್ಥಳೀಯರ ಬೇಡಿಕೆ ಮೇರೆಗೆ 2–3 ತಿಂಗಳಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು’ ಎಂದು ಅವರು ತಿಳಿಸಿದರು. 

ಪ್ರತ್ಯೇಕ ರಾಜ್ಯದ ಕೂಗು: ಪ್ರತ್ಯೇಕ ರಾಜ್ಯ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗೃತಿ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.