ADVERTISEMENT

ಆರ್‌ಎಸ್‌ಎಸ್‌ ಚಿವುಟಿದರೆ, ಬಿಜೆಪಿ ಅಳುವುದೇಕೆ?: ಸಚಿವ ಪ್ರಿಯಾಂಕ್ ಖರ್ಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಫೆಬ್ರುವರಿ 2026, 7:15 IST
Last Updated 18 ಫೆಬ್ರುವರಿ 2026, 7:15 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಬೆಂಗಳೂರು: ಆರ್‌ಎಸ್‌ಎಸ್‌ ಆದಾಯ ಮೂಲದ ಬಗ್ಗೆ ಪ್ರಶ್ನೆ ಎತ್ತಿದ್ದೇ ತಡ, ಬಿಜೆಪಿಯ ಸಂಘಪ್ಪಗಳು ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ. ಆರ್‌ಎಸ್‌ಎಸ್‌ ಚಿವುಟಿದರೆ, ಬಿಜೆಪಿ ಅಳುವುದೇಕೆ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ಬಿಜೆಪಿಯ ಸಂಘಪ್ಪಗಳು ಆರ್‌ಎಸ್‌ಎಸ್‌ ಪರವಾಗಿ ಸ್ಪರ್ಧೆಗೆ ಬಿದ್ದವರಂತೆ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಅದನ್ನು (ಆರ್‌ಎಸ್‌ಎಸ್‌) ಸಮರ್ಥಿಸುವುದು ಅನಿವಾರ್ಯ. ಈ ಮೂಲಕ ಆರ್‌ಎಸ್‌ಎಸ್‌ ಹಾಗೂ ಬಿಜೆಪಿಗೆ ಸಂಬಂಧವಿಲ್ಲ ಎಂಬ ಮೋಹನ್ ಭಾಗವತರ ಹೇಳಿಕೆ ಶತಮಾನದ ಸುಳ್ಳು ಎಂಬುದನ್ನು ಬಿಜೆಪಿಯವರೇ ನಿರೂಪಿಸುತ್ತಿದ್ದಾರೆ' ಎಂದು ಕುಟುಕಿದ್ದಾರೆ.

'ಬಿಜೆಪಿ ನಾಯಕರು ತಾವು ಮಾಡಿದ ಟೀಕೆ, ತಾವು ನೀಡಿದ ಹೇಳಿಕೆಗಳೆಲ್ಲದರ ರಿಪೋರ್ಟ್ ಕಾರ್ಡ್‌ ಅನ್ನು ನಾಗಪುರಕ್ಕೆ ಕಳಿಸಿಕೊಡಬೇಕು. ಯಾರು ಹೆಚ್ಚು ತೀವ್ರವಾಗಿ ನನ್ನನ್ನು ನಿಂದಿಸಿರುತ್ತಾರೋ ಅವರಿಗೆ ಪ್ರಮೋಷನ್ ದೊರಕಲಿದೆ‘ ಎಂದೂ ಟೀಕಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.