ADVERTISEMENT

ಸಾಮರ್ಥ್ಯವಿದ್ದರೆ ಸರ್ಕಾರ ಬೀಳಿಸಿ ನೋಡೋಣ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2018, 16:32 IST
Last Updated 27 ಡಿಸೆಂಬರ್ 2018, 16:32 IST
ಪ್ರಿಯಾಂಕ್‌ ಖರ್ಗೆ
ಪ್ರಿಯಾಂಕ್‌ ಖರ್ಗೆ   

ಕಲಬುರ್ಗಿ: ‘ಶಾಸಕ ಉಮೇಶ ಕತ್ತಿ ಅವರಿಗೆ ಸಾಮರ್ಥ್ಯ ಇದ್ದರೆ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ತೋರಿಸಲಿ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಇಂದಿಲ್ಲಿ ಸವಾಲು ಹಾಕಿದರು.

‘ಹದಿನೈದು ದಿನಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ’ ಎಂದು ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ. ಇಂಥ ಡೆಡ್‌ಲೈನ್‌ಗಳನ್ನು ನಾವು ಎಷ್ಟೋ ನೋಡಿ ಬಿಟ್ಟಿದ್ದೇವೆ’ ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

‘ಜನರು ಆಯ್ಕೆ ಮಾಡಿರುವ ಸರ್ಕಾರವನ್ನು ಬೀಳಿಸುತ್ತಾರೆ ಎಂದರೆ; ಬಿಜೆಪಿ ಮುಖಂಡರಿಗೆ ಸಂವಿಧಾನದ ಮೇಲೆ ನಂಬಿಕೆ, ಗೌರವ ಏನೂ ಇಲ್ಲ ಎಂದರ್ಥ ಅಲ್ಲವೆ?’ ಎಂದು ಪ್ರಿಯಾಂಕ್‌ ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.