ADVERTISEMENT

ರಾಠೋಡ್ ಜೀವಕ್ಕೆ ಹಾನಿಯಾದರೆ ಪ್ರಿಯಾಂಕ್‌ ಹೊಣೆ: ಎನ್‌.ರವಿಕುಮಾರ್‌

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2023, 14:12 IST
Last Updated 19 ನವೆಂಬರ್ 2023, 14:12 IST
ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌
ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌    

ಬೆಂಗಳೂರು: ‘ನಮ್ಮ ಪಕ್ಷದ ನಾಯಕ ಮಣಿಕಂಠ ರಾಠೋಡ್ ಅವರ ಜೀವಕ್ಕೇನಾದರೂ ಹಾನಿಯಾದರೆ ಅದಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಕಾಂಗ್ರೆಸ್‌ ಸರ್ಕಾರವೇ ನೇರ ಹೊಣೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಹೇಳಿದ್ದಾರೆ.

‘ಮಣಿಕಂಠ ಅವರ ಮೇಲೆ ಹಲ್ಲೆ ಖಂಡನೀಯ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಸಚಿವ ಪ್ರಿಯಾಂಕ್ ಖರ್ಗೆ, ಮಣಿಕಂಠ ರಾಠೋಡ್‌ ಅವರನ್ನು ಇನ್ನಿಲ್ಲದಂತೆ ಟಾರ್ಗೆಟ್‌ ಮಾಡಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಅವರು ದೂರಿದ್ದಾರೆ.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪ್ರತಿದಿನ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದಬ್ಬಾಳಿಕೆ, ಹಲ್ಲೆ, ಸುಳ್ಳು ಮೊಕದ್ದಮೆ, ಬೆದರಿಕೆ ಪ್ರಕರಣಗಳು ನಡೆಯುತ್ತಿವೆ. ಕಾರ್ಯಕರ್ತರ ಕೊಲೆಯೂ ಆಗಿವೆ’ ಎಂದೂ ಎನ್.ರವಿಕುಮಾರ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.