ADVERTISEMENT

Karnataka Politics | ಪಕ್ಷದಲ್ಲಿ ಯಾರೂ ಸಿಎಂ ವಿರುದ್ಧ ಇಲ್ಲ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 16:23 IST
Last Updated 21 ಫೆಬ್ರುವರಿ 2026, 16:23 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಬೆಂಗಳೂರು: ‘ಕಾಂಗ್ರೆಸ್‌ನಲ್ಲಿ ಯಾರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಲ್ಲ. ನಮ್ಮ ಪಕ್ಷದ ಎಲ್ಲರೂ ಅವರ ಜೊತೆಗೆ ಇದ್ದಾರೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ‘ಎಕ್ಸ್’ ಪೋಸ್ಟ್ ಏಕೆ ಮಾಡಿದ್ದಾರೆಂದು ಗೊತ್ತಿಲ್ಲ. ಕುರಿ ಕಾಯುವವನು ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳಲು ಆಗುವುದಿಲ್ಲ ಎಂದರೆ, ಅವರು ದಾಖಲೆಯ ಬಜೆಟ್ ಮಂಡನೆ ಮಾಡಲು ಸಾಧ್ಯವೇ? ಮುಖ್ಯಮಂತ್ರಿಯಾಗಿ ಅವರು ದೇವರಾಜ ಅರಸು ದಾಖಲೆ ಮುರಿದಿದ್ದಾರೆ. ಒಳ್ಳೆಯ ಆಡಳಿತ ನೀಡುತ್ತಿದ್ದಾರೆ’ ಎಂದರು.

‘ತಮ್ಮ ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯನವರು ಹಲವು ಭಾಗ್ಯಗಳನ್ನು ನೀಡಿದ್ದರು. ಇದೀಗ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಯೋಜನೆ ರೂಪಿಸಿ, ಅನುಷ್ಠಾನಗೊಳಿಸಿದ್ದಾರೆ’ ಎಂದರು.

ADVERTISEMENT

‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬದ್ದತೆಗೆ ಎದುರಾಳಿಗಳು ಯಾರೆಂದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು. ಅವರೇ ಬಹಿರಂಗವಾಗಿ ಇದನ್ನು ಹೇಳಿದ್ದಾರೆ. ಬುದ್ದ, ಬಸವ, ಅಂಬೇಡ್ಕರ್ ತತ್ವ ಪಾಲಿಸಿಕೊಂಡು ಬಂದವರು ಸಿದ್ದರಾಮಯ್ಯನವರು. ಆ ವಿಚಾರಕ್ಕೆ ವಿರೋಧ ಮಾಡಿದವರೇ ಬಿಜೆಪಿ, ಆರ್‌ಎಸ್‌ಎಸ್‌ನವರು’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.