ADVERTISEMENT

RSS ಬಗ್ಗೆ ಸಿಎಂಗೆ ಪ್ರಿಯಾಂಕ್‌ ಖರ್ಗೆ ಪತ್ರ: ಬಿಜೆಪಿಯಿಂದ ‘ಪೋಸ್ಟರ್‌’ ವಾರ್!

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 14:47 IST
Last Updated 13 ಅಕ್ಟೋಬರ್ 2025, 14:47 IST
<div class="paragraphs"><p>RSS ಬಗ್ಗೆ ಸಿಎಂಗೆ ಪ್ರಿಯಾಂಕ್‌ ಖರ್ಗೆ ಪತ್ರ: ಬಿಜೆಪಿಯಿಂದ ‘ಪೋಸ್ಟರ್‌’ ವಾರ್!</p></div>

RSS ಬಗ್ಗೆ ಸಿಎಂಗೆ ಪ್ರಿಯಾಂಕ್‌ ಖರ್ಗೆ ಪತ್ರ: ಬಿಜೆಪಿಯಿಂದ ‘ಪೋಸ್ಟರ್‌’ ವಾರ್!

   

ಕಲಬುರಗಿ: ಸರ್ಕಾರಿ, ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯ ಚಟುವಟಿಕೆ ನಿಷೇಧ ಕೋರಿ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ‘ಪೋಸ್ಟರ್‌’ ಅಂಟಿಸಿ ತಿರುಗೇಟು ನೀಡಿದ್ದಾರೆ.

ಸರ್ದಾರ್‌ ವಲ್ಲಭಭಾಯಿ ಪಟೇಲ್ ವೃತ್ತ ಸೇರಿದಂತೆ ನಗರದ ವಿವಿಧೆಡೆ ಬಿಜೆಪಿ ಮುಖಂಡರು ‘ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್‌ ಅನ್ನೂ ಪ್ರೀತಿಸುತ್ತಾರೆ’ ಎಂಬ ಪೋಸ್ಟರ್‌ ಅಂಟಿಸಿದ್ದಾರೆ.

ADVERTISEMENT

‘ನೆಹರೂ–ಇಂದಿರಾ ಗಾಂಧಿ ಕಾಲದಲ್ಲೂ ಆರ್‌ಎಸ್‌ಎಸ್ ಅನ್ನು ಏನೂ ಮಾಡಲು ಆಗಿಲ್ಲ. ಆದರೂ ಪ್ರಿಯಾಂಕ್‌ ಖರ್ಗೆ ಉದ್ಧಟತನದ ಹೇಳಿಕೆ ಕೊಟ್ಟಿದ್ದಾರೆ. ಅದಕ್ಕೆ ತಿರುಗೇಟು ನೀಡಲು ಯುವಜನರು ಸೇರಿಕೊಂಡು ‘ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್‌ ಅನ್ನೂ ಪ್ರೀತಿಸುತ್ತಾರೆ’ ಎಂಬ ಪೋಸ್ಟರ್‌ ಅಂಟಿಸುತ್ತಿದ್ದೇವೆ. ರಾಷ್ಟ್ರಭಕ್ತರೆಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ’ ಎಂದು ಬಿಜೆಪಿ ಮುಖಂಡರು ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.