ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕಾಂಗ್ರೆಸ್ ‘ತಾರಾ ಪ್ರಚಾರಕಿ’ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಚಿತ್ರದುರ್ಗ ನಗರದ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಿಯಾಂಕಾ, ಸಂಜೆ 6 ಗಂಟೆಗೆ ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡಾ ಈ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.