ADVERTISEMENT

ಕರ್ನಾಟಕ ಬಂದ್: ಜನಜೀವನಕ್ಕೆ ತಟ್ಟದ ಬಂದ್‌ ಬಿಸಿ

ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬಹುತೇಕ ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿವೆ. ರಾಜ್ಯದ ಯಾವ್ಯಾವ ಭಾಗದಲ್ಲಿ ಬಂದ್‌ಗೆ ಯಾವ ರೀತಿಯ ಬೆಂಬಲ ವ್ಯಕ್ತವಾಗುತ್ತಿದೆ? ಎಲ್ಲೆಲ್ಲಿ ಪರಿಸ್ಥಿತಿ ಹೇಗಿದೆ ಎಂಬ ಕ್ಷಣಕ್ಷಣದ ಅಪ್‌ಡೇಟ್ಸ್ ಇಲ್ಲಿ ಲಭ್ಯ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 13:52 IST
Last Updated 5 ಡಿಸೆಂಬರ್ 2020, 13:52 IST

ಚಿತ್ರದುರ್ಗ: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಶನಿವಾರ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಪ್ರತಿಭಟನೆಗೆ ಮಾತ್ರ ಸೀಮಿತವಾಯಿತು. ಜಿಲ್ಲೆಯ ಜನರು ಹೋರಾಟಕ್ಕೆ ಬೆಂಬಲ ನೀಡಲಿಲ್ಲ.

ವಿಜಯಪುರ: ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಹಾಗೂ ನಿಗಮವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಶನಿವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಪೂರ್ಣ ವಿಫಲವಾಯಿತು.

ಮಂಡ್ಯ: ಮರಾಠ ಅಭಿವೃದ್ಧಿ ನಿಗಮ ರಚನೆ ಕೈಬಿಡಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಕೋಲಾರ: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ನೀಡಿದ್ದ ‘ಕರ್ನಾಟಕ ಬಂದ್‌’ ಕರೆಗೆ ಜಿಲ್ಲೆಯಲ್ಲಿ ಶನಿವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಜನಜೀವನಕ್ಕೆ ಬಂದ್‌ನ ಬಿಸಿ ತಟ್ಟಲಿಲ್ಲ.

ಕಾರವಾರ: ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿ ಜನಜೀವನ ಎಂದಿನಂತೆ ಸಾಗಿತು.

ಚಾಮರಾಜನಗರ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿ ಕನ್ನಡ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲೆಯ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿ, ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದವು.

ರಾಮನಗರ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಶನಿವಾರ ಕನ್ನಡಪರ ಸಂಘಟನೆಗಳ ಒಕ್ಕೂಟವು ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ವಿವಿಧ ಸಂಘಟನೆಗಳು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದವು.

ಉಡುಪಿಯಲ್ಲಿ ಬಂದ್ ನೀರಸ

ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್‌ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಎಂದಿನಂತೆ ಇದೆ.

ಶಿವಮೊಗ್ಗದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ

ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಶಿವಮೊಗ್ಗ ನಗರದಲ್ಲಿ ನೀರಿಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಮನಗರ: ಪರಿಣಾಮ ಬೀರದ ಬಂದ್

ಕನ್ನಡಪರ ಸಂಘಟನೆಗಳ ಒಕ್ಕೂಟವು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಮನಗರ ಜಿಲ್ಲೆಯಲ್ಲಿ ಬೆಂಬಲ ದೊರೆತಿಲ್ಲ.

ADVERTISEMENT

ಬಾಗಲಕೋಟೆಯಲ್ಲಿ ಬಂದ್ ವಿಫಲ

ಬಂದ್: ಬೆಳಗಾವಿಯಲ್ಲಿ ಕಾಣದ ಬೆಂಬಲ

ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಲಬುರ್ಗಿಯಲ್ಲಿ ಬಂದ್ ವಿಫಲ

ಕಲಬುರ್ಗಿ: ಮರಾಠಾ ಅಭಿವೃದ್ಧಿ ನಿಗಮ ಕೈಬಿಡುವಂತೆ ಆಗ್ರಹಿಸಿ ಶನಿವಾರ ಕರೆ ನೀಡಿದ ರಾಜ್ಯ ಬಂದ್ ಕಲಬುರ್ಗಿಯಲ್ಲಿ ಯಾವುದೇ ರೀತಿಯ ಪರಿಣಾಮ ಬೀರಲಿಲ್ಲ.

ಕಲಬುರ್ಗಿಯಲ್ಲಿ ಬಂದ್ ವಿಫಲ; ಪ್ರತಿಭಟನೆಗೂ ಸುಳಿಯದ ಕಾರ್ಯಕರ್ತರು

ಬೆಂಗಳೂರಿನಲ್ಲಿ ವ್ಯಾಪಾರ-ವಹಿವಾಟು ಎಂದಿನಂತೆ

ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಬೆಂಗಳೂರು ನಗರದಲ್ಲಿ ಸದ್ಯ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಿತ್ರದುರ್ಗ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆಯ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದರು.

ಎಂದಿನಂತೆ ಕೆಎಸ್ಆರ್‌ಟಿಸಿ ಬಸ್‌ ಸಂಚಾರ

ಕೆಎಸ್ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ಎಂದಿನಂತೆ ಸುಗಮವಾಗಿದೆ ಎಂದು ನಿಗಮ ಸ್ಪಷ್ಟಪಡಿಸಿದೆ. ಎಲ್ಲಾ 17 ವಿಭಾಗಗಳ ಪೈಕಿ ಯಾವುದೇ ವಿಭಾದಲ್ಲೂ ಬಸ್ ಕಾರ್ಯಾಚರಣೆ ಏರುಪೇರಾಗಿಲ್ಲ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ನಿಲ್ದಾಣದ ಬಳಿ ಜಮಾಯಿಸಿರುವ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು

ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಮೆಟ್ರೊ ರೈಲು ಸಂಚಾರ ಎಂದಿನಂತಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಮೆಟ್ರೊ ರೈಲು ಸಂಚಾರ ಎಂದಿನಂತಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ

ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್‌ಗೆ ಕ್ರಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.