ADVERTISEMENT

ಸಂಸ್ಕರಿಸಿದ ಆಹಾರ ಸೇವನೆಯಿಂದ ಅಪಾಯ: ಸಂಸತ್‌ನಲ್ಲಿ ತೇಜಸ್ವಿ ಸೂರ್ಯ ಕಳವಳ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 16:03 IST
Last Updated 4 ಡಿಸೆಂಬರ್ 2025, 16:03 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ   

ನವದೆಹಲಿ: ಭಾರತದಲ್ಲಿ ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಆರೋಗ್ಯದ ಅಪಾಯಗಳ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ಗುರುವಾರ ಗಮನ ಸೆಳೆದರು. 

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಕಪ್ ನೂಡಲ್ಸ್‌ಗಳು, ಸಿದ್ಧಪಡಿಸಿದ ಆಹಾರ ಪದಾರ್ಥಗಳು ಮತ್ತು ಸಕ್ಕರೆ ಬೆರೆಸಿದ ಪಾನೀಯಗಳಂತಹ ಸಂಸ್ಕರಿಸಿದ ಆಹಾರಗಳು ಸಾಂಪ್ರದಾಯಿಕ ಆಹಾರಗಳ ಸ್ಥಾನವನ್ನು ಹೆಚ್ಚಾಗಿ ಕಬಳಿಸುತ್ತಿವೆ. ಈ ಉತ್ಪನ್ನಗಳ ಹೆಚ್ಚಿನ ಸೇವನೆಯು ಸ್ಥೂಲಕಾಯತೆ, ಹೃದಯರಕ್ತನಾಳದ ಕಾಯಿಲೆಗಳು, ಟೈಪ್ 2 ಮಧುಮೇಹ ಮತ್ತು ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ‘ ಎಂದರು. 

ಸಂಸ್ಕರಿಸಿದ ಆಹಾರಗಳಲ್ಲಿ ಎಚ್ಚರಿಕೆ ಲೇಬಲ್ ಅಂಟಿಸಬೇಕು. ಈ ಉತ್ಪನ್ನಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಬೇಕು ಎಂದು ಸಲಹೆ ನೀಡಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.