ADVERTISEMENT

ಬೆಂಗಳೂರು ವಿಶ್ವವಿದ್ಯಾಲಯ: ಕುಲಪತಿಗೆ 67 ಅಧ್ಯಾಪಕರ ಪತ್ರ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 19:31 IST
Last Updated 6 ಜುಲೈ 2025, 19:31 IST
<div class="paragraphs"><p>ಬೆಂಗಳೂರು&nbsp;ವಿಶ್ವವಿದ್ಯಾಲಯ</p></div>

ಬೆಂಗಳೂರು ವಿಶ್ವವಿದ್ಯಾಲಯ

   

ಬೆಂಗಳೂರು: ‘ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿಗಳ ಪ್ರಾತಿನಿಧ್ಯವನ್ನು ಕುಗ್ಗಿಸುವ ಹುನ್ನಾರ ನಡೆಯುತ್ತಿದೆ. ಇದನ್ನು ಖಂಡಿಸುತ್ತೇವೆ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ 67 ಅಧ್ಯಾಪಕರು ಕುಲಪತಿಗೆ ಪತ್ರ ಬರೆದಿದ್ದಾರೆ.

‘ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಬ್ಯಾಕ್‌ಲಾಗ್‌ ಹುದ್ದೆಗಳು ಇವೆ. ಅವುಗಳನ್ನು ಭರ್ತಿ ಮಾಡಲು ವಿಶ್ವವಿದ್ಯಾಲಯವು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬದಲಿಗೆ ಬೇರೆ ವಿಶ್ವವಿದ್ಯಾಯಗಳಿಂದ ಅಧ್ಯಾಪಕರನ್ನು ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿಗಳ ಪ್ರಾತಿನಿಧ್ಯ ಕುಗ್ಗಿಸುವ ಯತ್ನ ನಡೆಯುತ್ತಿದೆ’ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ADVERTISEMENT

‘ವರ್ಗಾವಣೆ ಮತ್ತು ನೇಮಕಾತಿಯಲ್ಲಿ ಸರ್ಕಾರದ ರೋಸ್ಟರ್‌ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಈ ಬಗ್ಗೆ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ಇಲ್ಲದೇ ಇದ್ದರೆ, ಹೋರಾಟ ನಡೆಸುತ್ತೇವೆ’ ಎಂದು ಅಧ್ಯಾಪಕರು ಒತ್ತಾಯಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿಗಳ ಮತ್ತು ಪರಿಶಿಷ್ಟ ಪಂಗಡಗಳ ಶಿಕ್ಷಕರ ಸಂಘವೂ ಕುಲಪತಿಗೆ ಪತ್ರ ಬರೆದಿದ್ದು, ‘15 ದಿನಗಳಲ್ಲಿ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.