ADVERTISEMENT

ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಜಗಿಯುವುದು ನಿಷೇಧ: ‘ನಿಯಮ ಉಲ್ಲಂಘಿಸಿದರೆ ಕ್ರಮ’

​ಪ್ರಜಾವಾಣಿ ವಾರ್ತೆ
Published 30 ಮೇ 2020, 10:20 IST
Last Updated 30 ಮೇ 2020, 10:20 IST
   

ಬೆಂಗಳೂರು: ‘ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿಯುವುದು ಮತ್ತು ಉಗುಳುವುದನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದರು.

ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಪ್ರತಿವರ್ಷ ಮೇ 31ನ್ನು ವಿಶ್ವ ತಂಬಾಕು ರಹಿತ ದಿನವಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ’ ಎಂದರು.

ಕೊರೊನಾ ಸೋಂಕು ದೃಢಪಟ್ಟರೂ ಸಹಕರಿಸದ ಬಿಬಿಎಂಪಿ ಸದಸ್ಯನವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮುಲು, ‘‍ಅವರನಡವಳಿಕೆಯನ್ನು ಸರ್ಕಾರ ಸಹಿಸಲ್ಲ. ಕೊರೊನಾ ಸೋಂಕು ದೃಢಪಟ್ಟ ಬಳಿಕ ಅವರು ಸಹಕರಿಸಲೇಬೇಕು. ತಕ್ಷಣ ಆಸ್ಪತ್ರೆಗೆ ದಾಖಲಾಗಬೇಕು. ಈ ರೀತಿ ತಪ್ಪಿಸಿಕೊಳ್ಳುವುದು ಸರಿಯಲ್ಲ. ಅವರು ದಾಖಲಾಗದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ADVERTISEMENT

‘ಕೊರೊನಾ ಖಚಿತವಾದ ಬಳಿಕ ಮುಚ್ಚಿಟ್ಟುಕೊಂಡರೆ ಎಲ್ಲರಿಗೂ ಸಮಸ್ಯೆ.ಅವರಿಂದ ಎಲ್ಲರಿಗೂ ಸಮಸ್ಯೆ ಆಗುತ್ತದೆ. ಅದನ್ನು ಅವರು ಅರ್ಥ ಮಾಡಿಕೊಳ್ಳಬೇಕು’ ಎಂದರು.

ಅವ್ಯವಹಾರ ನಡೆದಿಲ್ಲ: ಕೋವಿಡ್‌–19 ಸೋಂಕು ತಡೆಗೆ ಪಿಪಿಇ ಕಿಟ್ ಸೇರಿ ಆರೋಗ್ಯ ಪರಿಕರಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಖರೀದಿ ವೇಳೆ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಆಗಿಲ್ಲ. ಕಾಂಗ್ರೆಸ್‌ನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಕೆಲಸ ಇಲ್ಲದವರು ಏನೇನೋ ಆರೋಪ ಮಾಡುತ್ತಿದ್ದಾರೆ. ಸರ್ಕಾರ ಎಲ್ಲ ಖರೀದಿಯನ್ನೂ ಪಾರದರ್ಶಕವಾಗಿಯೇ ನಡೆಸಿದೆ’ ಎಂದು ಸಮರ್ಥನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.