ADVERTISEMENT

ಯೋಜನೆ ದುರ್ಬಳಕೆ: ತನಿಖೆಗೆ ಆಗ್ರಹಿಸಿದ ಸಿದ್ದರಾಮಯ್ಯ

ಕಾರ್ಮಿಕ ಇಲಾಖೆಯ ₹ 8,000 ಕೋಟಿ ಮೊತ್ತದ ನಿಧಿಯಿಂದ ಸಿದ್ಧ ಆಹಾರ, ಆಹಾರ ಸಾಮಾಗ್ರಿ ವಿತರಣೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2020, 20:00 IST
Last Updated 12 ಏಪ್ರಿಲ್ 2020, 20:00 IST
   

ಬೆಂಗಳೂರು: ‘ಕೊರೊನಾದಿಂದ ಸಂತ್ರಸ್ತರಾದ ಕಾರ್ಮಿಕರಿಗೆ ಸಿದ್ಧ ಆಹಾರ ವಿತರಿಸುವ ಕಾರ್ಮಿಕ ಇಲಾಖೆಯ ಯೋಜನೆಯನ್ನು ಬಿಜೆಪಿ ರಾಜಕೀಯವಾಗಿ ದುರಪಯೋಗಗೊಳಿಸುತ್ತಿರುವ ದೂರುಗಳ ಬಗ್ಗೆ ತನಿಖೆ ನಡೆಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿಯಲ್ಲಿರುವ ₹ 8,000 ಕೋಟಿ ಮೊತ್ತದ ನಿಧಿ ಬಳಸಿ ಆಹಾರ ಪೊಟ್ಟಣಗಳನ್ನು ಬಿಜೆಪಿ ಶಾಸಕರು ಮತ್ತು ಮಹಾನಗರ ಪಾಲಿಕೆ ಸದಸ್ಯರು ಬೇಕಾಬಿಟ್ಟಿಯಾಗಿ ವಿತರಿಸುತ್ತಿದ್ದಾರೆ. ತಮ್ಮ ಭಾವಚಿತ್ರ ಮತ್ತು ಹೆಸರಿರುವ ಲೇಬಲ್ ಹಚ್ಚಿ ತಮ್ಮ ಮತದಾರರಿರುವ ಪ್ರದೇಶದಲ್ಲಿ ವಿತರಿಸುತ್ತಿದ್ದಾರೆ. ಕಾರ್ಮಿಕ ಸಂಘಗಳನ್ನು ಹೊರಗಿಟ್ಟು ಈ ಯೋಜನೆ ಅನುಷ್ಠಾನದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಸೇರಿಸಿಕೊಂಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಕಾರ್ಮಿಕರ ಜೊತೆ ಸಂಬಂಧವೇ ಇಲ್ಲದ ಸಂಸ್ಥೆಗಳಿಗೆ ಕೊಟ್ಟಿರುವ ಜವಾಬ್ದಾರಿಯನ್ನು ವಾಪಸು ಪಡೆಯಬೇಕು’ ಎಂದೂ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.