ADVERTISEMENT

‘ಮುಂಬಡ್ತಿ ಆದೇಶ ಹಿಂಪಡೆಯದಿದ್ದರೆ ನ್ಯಾಯಾಂಗ ನಿಂದನೆ’

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2019, 19:41 IST
Last Updated 11 ಮಾರ್ಚ್ 2019, 19:41 IST
   

ಬೆಂಗಳೂರು: ‘ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಇದೇ ಫೆ.27 ಮತ್ತು 28ರಂದು ಪರಿಶಿಷ್ಟ ಜಾತಿ (ಎಸ್‌.ಸಿ) ಮತ್ತು ಪರಿಶಿಷ್ಟ ವರ್ಗದ (ಎಸ್‌.ಟಿ) ನೌಕರರಿಗೆ ನೀಡಿರುವ ಬಡ್ತಿ ವಾಪಸು ಪಡೆಯಬೇಕು’ ಎಂದು ಆಗ್ರಹಿಸಿ ಅಲ್ಪಸಂಖ್ಯಾತ, ಹಿಂದುಳಿದ, ಸಾಮಾನ್ಯ (ಅಹಿಂಸಾ) ನೌಕರರ ಒಕ್ಕೂಟ ಮುಖ್ಯ ಕಾರ್ಯದರ್ಶಿಗೆ ಸೋಮವಾರ ಮನವಿ ಸಲ್ಲಿಸಿದೆ.

ಹಿಂಬಡ್ತಿಗೆ ಒಳಗಾದ ಎಸ್‌.ಸಿ, ಎಸ್‌.ಟಿ ನೌಕರರಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಫೆ. 27ರಂದು ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಮಾರ್ಚ್‌ 1ರಂದು ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಆದರೆ, ಕರ್ನಾಟಕ ವಿಶ್ವವಿದ್ಯಾಲಯ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳಲ್ಲಿ ಫೆ. 27 ಮತ್ತು 28ರಂದು ಹಲವು ಅಧಿಕಾರಿಗಳ ಹಿಂಬಡ್ತಿ ವಾಪಸು ಪಡೆದು ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.

ಈ ಎಲ್ಲ ಆದೇಶಗಳನ್ನು ತಕ್ಷಣ ರದ್ದುಪಡಿಸಬೇಕು. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲು ವಿಫಲರಾದರೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದು ಅನಿವಾರ್ಯವಾ
ಗಲಿದೆ ಎಂದು ಒಕ್ಕೂಟದ ಅಧ್ಯಕ್ಷ ಎಂ. ನಾಗರಾಜ್ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.