ADVERTISEMENT

ಆಸ್ತಿ ಮುಟ್ಟುಗೋಲು ನಿಯಮ ಪೂರ್ವಾನ್ವಯಗೊಳಿಸಲು ಸರ್ಕಾರ ಸಿದ್ಧವೇ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2019, 11:53 IST
Last Updated 28 ಡಿಸೆಂಬರ್ 2019, 11:53 IST
   

ಬೆಂಗಳೂರು: ಹೋರಾಟದ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿಯುಂಟು ಮಾಡುವವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಉತ್ತರ ಪ್ರದೇಶಸರ್ಕಾರದ ನಿಯಮವನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಬಿಜೆಪಿ ಸರ್ಕಾರದ ಚಿಂತನೆ ವಿರುದ್ಧವಿರುದ್ಧ ಗುಡುಗಿರುವ ಕಾಂಗ್ರೆಸ್‌ ನಾಯಕಸಿದ್ದರಾಮಯ್ಯ, ‘ಆಸ್ತಿ ಮುಟ್ಟುಗೋಲು ನಿಯಮ ಪೂರ್ವಾನ್ವಯವಾಗಲಿ, ಬಿಜೆಪಿಯವರ ಮೇಲೂ ಕ್ರಮ ಕೈಗೊಳ್ಳುವಂತಾಗಲಿ,’ಎಂದಿದ್ದಾರೆ.

ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕುರಿತು ಸರ್ಕಾರ ಎಚ್ಚರಿಕೆ ಸಂದೇಶ ರವಾನಿಸುತ್ತಲೇ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ‘ರಾಜ್ಯದ ಬಿಜೆಪಿ ಸರ್ಕಾರಗಲಭೆಕೋರರ ಆಸ್ತಿಯನ್ನು ಮುಟ್ಟುಗೋಲು ಹಾಕಲು ಚಿಂತನೆ ನಡೆಸಿದೆಯಂತೆ. ಇದನ್ನು ಪೂರ್ವಾನ್ವಯವಾಗಿ ಜಾರಿಗೊಳಿಸಿ ಹಿಂದಿನ ಗಲಭೆಗಳಲ್ಲಿ ಆರೋಪಿಗಳಾಗಿರುವ ಬಿಜೆಪಿ ನಾಯಕರ ಮೇಲೂ ಕ್ರಮಕೈಗೊಳ್ಳಲು ಸರ್ಕಾರ ಸಿದ್ದ ಇದೆಯೇ?’ ಎಂದು ಪ್ರಶ್ನೆ ಕೇಳಿದ್ದಾರೆ.

ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಹೋರಾಟದ ವೇಳೆ ಸಾರ್ವಜನಿಕರ ಆಸ್ತಿ ಹಾನಿಯುಂಟು ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲುಉತ್ತರ ಪ್ರದೇಶ ಸರ್ಕಾರ ನಿರ್ಧಾರ ಕೈಗೊಂಡಿತು. ಇದೇ ನಿಯಮವನ್ನೇ ಪಾಲಿಸಲು ರಾಜ್ಯ ಸರ್ಕಾರವು ಚಿಂತಿಸುತ್ತಿದೆ ಎಂದು ಮಂತ್ರಿಗಳು ಹೇಳಿದ್ದರು. ಈ ಹಿನ್ನೆಯಲ್ಲೇ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.