ADVERTISEMENT

ಆಸ್ತಿ ತೆರಿಗೆ: ರಿಯಾಯಿತಿ ಜುಲೈ 31ರವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 28 ಮೇ 2020, 20:22 IST
Last Updated 28 ಮೇ 2020, 20:22 IST
   

ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ಉಳಿದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ವೇಳೆ ಶೇ 5ರಷ್ಟು ರಿಯಾಯಿತಿ ಪಡೆಯುವ ಅವಕಾಶವನ್ನು ಜುಲೈ 31ರವರೆಗೆ ವಿಸ್ತರಿಸಲು ಕ್ರಮ ವಹಿಸುವಂತೆ ನಗರಾಭಿವೃದ್ಧಿ ಇಲಾಖೆ ಸೂಚಿಸಿದೆ.

ಆಸ್ತಿ ತೆರಿಗೆಯನ್ನು ಏಪ್ರಿಲ್‌ ತಿಂಗಳಲ್ಲೇ ಪಾವತಿಸುವವರಿಗೆ ಪ್ರತಿವರ್ಷವೂ ಶೇ 5ರಷ್ಟು ರಿಯಾಯಿತಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಕೊರೊನಾ ಸೋಂಕು ಹಬ್ಬುವುದನ್ನು ತಡೆಯಲು ಲಾಕ್‌ಡೌನ್‌ ಜಾರಿಗೊಳಿಸಿದ್ದರಿಂದ ರಿಯಾಯಿತಿ ಪಡೆಯುವ ಅವಧಿಯನ್ನು ಈ ಮೊದಲು ಮೇ 31ರ ವರೆಗೆ ವಿಸ್ತರಿಸಿ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಈ ಅವಧಿಯನ್ನು 2020ರ ಜುಲೈ 31ರವರೆಗೆ ವಿಸ್ತರಿಸಿ ಮೇ 22ರಂದು ಮತ್ತೊಂದು ಸುತ್ತೋಲೆಯನ್ನು ಹೊರಡಿಸಿದೆ.

ಆಸ್ತಿ ತೆರಿಗೆ ಪಾವತಿ ಮೇಲೆ ಜುಲೈ1ರಿಂದ ಅನ್ವಯವಾಗುವಂತೆ ದಂಡ ವಿಧಿಸುವ ಬದಲು 2020ರ ನ.1ರಿಂದ ಅನ್ವಯಿಸುವಂತೆ ಸೂಚಿಸಿದೆ.

ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲಿ ಮೇ 31ರ ಒಳಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಮಾತ್ರ ರಿಯಾಯಿತಿ ಸಿಗಲಿದೆ. ಇದನ್ನೂ ಜುಲೈ 31ರ ವರೆಗೆ ವಿಸ್ತರಿಸಬೇಕು ಎಂಬ ಬೇಡಿಕೆ ಇದೆಯಾದರೂ, ಈ ಕುರಿತು ಬಿಬಿಎಂಪಿಯಾಗಲೀ, ನಗರಾಭಿವೃದ್ಧಿ ಇಲಾಖೆಯಾಗಲೀ ಯಾವುದೇ ಆದೇಶ ಹೊರಡಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.