ADVERTISEMENT

ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್‌: ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2018, 10:03 IST
Last Updated 27 ಡಿಸೆಂಬರ್ 2018, 10:03 IST
   

ಬೆಂಗಳೂರು:ಬಸ್ ದರ ಏರಿಕೆ ಸಂಬಂಧ ಮತ್ತೊಮ್ಮೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲು ಸಾರಿಗೆ ಇಲಾಖೆ ಮುಂದಾಗಿದ್ದು,ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ‘ಈ‌ ಮೊದಲು ಶೇ 18ರಷ್ಟು ಪ್ರಯಾಣ ದರ ಏರಿಕೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಈಗ ಮತ್ತೆ ಪ್ರಸ್ತಾವ ಸಲ್ಲಿಸಿ ವಿವೇಚನೆಗನುಸಾರವಾಗಿ ದರ ಏರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು. ಬುಧವಾರ ನಡೆದ ಮಂಡಳಿ ಸಭೆಯಲ್ಲೂ ಸಾರಿಗೆ ನಿಗಮಗಳ ಎಂಡಿಗಳು ದರ ಏರಿಕೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗೆ ಶುಕ್ರವಾರ ಪ್ರಸ್ತಾವ ಸಲ್ಲಿಸಲಾಗುವುದು' ಎಂದು ತಿಳಿಸಿದರು.

ಡೀಸೆಲ್ ಬೆಲೆ ಹೆಚ್ಚಳವಾಗಿರುವುದರಿಂದ ಎಲ್ಲಾ ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿವೆ. ಈಗಾಗಲೇ ಎಲ್ಲಾ ಸಾರಿಗೆ ನಿಗಮಗಳು ಸುಮಾರು ₹ 677 ಕೋಟಿನಷ್ಟ ಅನುಭವಿಸಿವೆ.ಹೀಗಾಗಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಡೀಸೆಲ್ ಬೆಲೆ ₹ 53 ‌ಇದ್ದಾಗ ಬಸ್ ದರ ಏರಿಕೆ‌ ಮಾಡಲಾಗಿತ್ತು. ಅಲ್ಲಿಂದ ‌ಇಲ್ಲಿವರೆಗೆ‌ ಬಸ್ ದರ ಹೆಚ್ಚಳ ಮಾಡಿಲ್ಲ. ಹೀಗಾಗಿ ಬಸ್ ದರ ಏರಿಕೆ ಮಾಡಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗೆ ವಾಸ್ತವ ಚಿತ್ರಣ ತಿಳಿಸಿ ಸ್ವಲ್ಪವಾದರೂ ದರ ಹೆಚ್ಚಿಸುವಂತೆ ಕೋರಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.