ADVERTISEMENT

ಸಂಸತ್ ಸದಸ್ಯರ ಮನೆಯ ಮುಂದೆ ಸತ್ಯಾಗ್ರಹ: ಮಾತೆ ಮಹಾದೇವಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2018, 12:36 IST
Last Updated 18 ಜುಲೈ 2018, 12:36 IST
ಮಾತೆ ಮಹಾದೇವಿ
ಮಾತೆ ಮಹಾದೇವಿ   

ಕೂಡಲಸಂಗಮ: ರಾಷ್ಟ್ರೀಯ ಬಸವ ದಳಹಾಗೂ ಇನ್ನಿತರ ಬಸವ ತತ್ವ ಪರ ಸಂಘಟನೆಗಳು ಸೇರಿಕೊಂಡು ಜುಲೈ 21ರ ಶನಿವಾರ ರಾಜ್ಯಾದ್ಯಂತ ಸಂಸತ್ ಸದಸ್ಯರ ಮನೆಯ ಮುಂದೆ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯೆಕ್ಷೆ ಜಗದ್ಗುರು ಮಾತೆ ಮಹಾದೇವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರವು ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಿ, ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನಕ್ಕೆಶಿಫಾರಸ್ಸು ಮಾಡಿಅದನ್ನು ಕೇಂದ್ರ ಸರ್ಕಾರದ ಅನುಮತಿಗೆ ಕಳಿಸಿಕೊಟ್ಟಿದೆ ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಇಲ್ಲ. ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಸಂಸತ್ ಸದಸ್ಯರು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದು ಅವರ ಕರ್ತವ್ಯವಾಗಿರುತ್ತದೆ.

ಕರ್ನಾಟಕ ಸರ್ಕಾರದ ಶಿಫಾರಸ್ಸನ್ನು ಮಾನ್ಯ ಮಾಡುವಂತೆ ಆಗ್ರಹಿಸಿ, ಕೇಂದ್ರ ಸರ್ಕಾರದ ನಿರ್ಲಕ್ಷ ಸ್ಥಿತಿಯನ್ನು ಪ್ರತಿಭಟಿಸಿ ರಾಜ್ಯಾದ್ಯಂತ ರಾಷ್ಟ್ರೀಯ ಬಸವ ದಳ ಹಾಗೂ ಇನ್ನಿತರ ಬಸವ ತತ್ವ ಪರ ಸಂಘಟನೆಗಳು ಸೇರಿ ಸಂಸತ್ ಸದಸ್ಯರ ಮನೆಯ ಮುಂದೆ ಶಾಂತಿಯುತವಾಗಿ ಧರಣಿ ಸತ್ಯಾಗ್ರಹವನ್ನು ಜುಲೈ 21ರ ಶನಿವಾರ ಹಮ್ಮಿಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.