ADVERTISEMENT

ಸರ್ಕಾರಿ ನೌಕರರ ಒಕ್ಕೂಟದಿಂದ ಪ್ರತಿಭಟನೆ ಇಂದು

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 23:17 IST
Last Updated 25 ಫೆಬ್ರುವರಿ 2021, 23:17 IST

ಬೆಂಗಳೂರು: ರಾಜ್ಯ ಸರ್ಕಾರ ನೌಕರ ವಿರೋಧಿ ಧೋರಣೆ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಶುಕ್ರವಾರ (ಫೆ. 26) ಪ್ರತಿಭಟನೆ ಹಮ್ಮಿಕೊಂಡಿದೆ.

ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ದರ ಹೆಚ್ಚಳವಾಗಿದೆ. ಜನ, ಸರ್ಕಾರಿ ನೌಕರರು ಸಂಕಷ್ಟದಲ್ಲಿ ದಿನ ಕಳೆಯುವಂತಾಗಿದೆ. 2.50ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ರಾಜ್ಯದಲ್ಲಿ ಖಾಲಿ ಇವೆ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡದೆ ಶೋಷಿಸಲಾಗುತ್ತಿದೆ ಎಂದು ಒಕ್ಕೂಟ ದೂರಿದೆ.

‘ಸರ್ಕಾರ ಜನ–ನೌಕರ ವಿರೋಧಿ ನೀತಿ ಖಂಡಿಸಿ ಒಕ್ಕೂಟದ ಎಲ್ಲ ಜಿಲ್ಲಾ, ತಾಲ್ಲೂಕು ಘಟಕಗಳು ಶುಕ್ರವಾರ ಮಧ್ಯಾಹ್ನ ಊಟದ ಅವಧಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಬಳಿಕ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ಒಕ್ಕೂಟದ ಗೌರವಾಧ್ಯಕ್ಷ ಮಹದೇವಯ್ಯ ಮಠಪತಿ ಮತ್ತು ಅಧ್ಯಕ್ಷ ಎನ್‌.ಇ. ನಟರಾಜನ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.