ADVERTISEMENT

ಎಪಿಎಂಸಿ, ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಕೆಪಿಸಿಸಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಮೇ 2020, 6:47 IST
Last Updated 20 ಮೇ 2020, 6:47 IST
   

ಬೆಂಗಳೂರು: ಎಪಿಎಂಸಿ ಮತ್ತು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ನೂತನ ಆಡಳಿತ ಸಮಿತಿ ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ (ಕೆಪಿಸಿಸಿ) ಬುಧವಾರ ವಿಧಾನಸೌಧ ಮತ್ತು ವಿಕಾಸಸೌಧ ನಡುವೆ ಇರುವ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

'ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ'ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಎಪಿಎಂಸಿಗೆ ತಂದಿರುವ ತಿದ್ದುಪಡಿ ರೈತರ ಪಾಲಿಗೆ ಕರಾಳ ಶಾಸನ. ಕಾರ್ಮಿಕರಿಗೆ ಕೆಲಸ ನೀಡಬೇಕು. ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿದರು.

‌ಭಿತ್ತಿಫಲಕ ಹಿಡಿದಿದ್ದ ನಾಯಕರು, ಗ್ರಾಮ ಪಂಚಾಯಿತಿಗಳಿಗೆ ತಕ್ಷಣ ಚುನಾವಣೆ ನಡೆಸಬೇಕು ಎಂದು ಘೋಷಣೆ ಕೂಗಿದರು.

ADVERTISEMENT

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.