ADVERTISEMENT

ಮೀನುಗಾರರ ಪತ್ತೆಗೆ ಒತ್ತಾಯಿಸಿ ಗಂಗಾಮತಸ್ಥರ ಸಂಘದ ವತಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2019, 11:38 IST
Last Updated 11 ಜನವರಿ 2019, 11:38 IST
ಮಲ್ಪೆ ಸಮುದ್ರದಲ್ಲಿ ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆ ಮಾಡಿಕೊಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ಗಂಗಾಮತಸ್ಥರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು
ಮಲ್ಪೆ ಸಮುದ್ರದಲ್ಲಿ ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆ ಮಾಡಿಕೊಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ಗಂಗಾಮತಸ್ಥರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು   

ಮೈಸೂರು: ಮಲ್ಪೆಯ ಸಮುದ್ರದಲ್ಲಿ ನಾಪತ್ತೆಯಾಗಿರುವ 7 ಮೀನುಗಾರರನ್ನು ಪತ್ತೆ ಮಾಡಿಕೊಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ಗಂಗಾಮತಸ್ಥರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

26 ದಿನಗಳ ಹಿಂದೆ ಮೀನುಗಾರರು ನಾಪತ್ತೆಯಾಗಿದ್ದಾರೆ. ಇದುವರೆಗೂ ಇವರು ಪತ್ತೆಯಾಗಿಲ್ಲ. ಕೂಡಲೇ ಪೊಲೀಸರು, ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಪತ್ತೆಕಾರ್ಯದಲ್ಲಿ ತೊಡಗಬೇಕು. ಮೀನುಗಾರರನ್ನು ರಕ್ಷಿಸುವ ಮೂಲಕ ಅವರ ಕುಟುಂಬಗಳಿಗೆ ಆಸರೆಯಾಗಬೇಕು ಎಂದು ಸಂಘದ ಅಧ್ಯಕ್ಷೆ ಪ್ರೊ.ಎಚ್.ಎಂ.ವಸಂತಮ್ಮ ಒತ್ತಾಯಿಸಿದರು.‌

ಮೀನುಗಾರರಾದ ಸತೀಶ, ಹರೀಶ, ರಮೇಶ, ದಾಮೋದರ್, ಚಂದ್ರಶೇಖರ್‌, ರವಿ, ಲಕ್ಷ್ಮಣ್ ಅವರು ಸುವರ್ಣ ತ್ರಿಭುಜ ಎಂಬ ಹಡಗಿನಲ್ಲಿ ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದಾರೆ. ಮೀನುಗಾರರ ರಕ್ಷಣೆಯನ್ನು ಆದ್ಯತೆಯಾಗಿ ಸ್ವೀಕರಿಸಬೇಕು ಎಂದು ಅವರು ಮನವಿ ಮಾಡಿದರು.

ADVERTISEMENT

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಚಿಕ್ಕಲಿಂಗಸ್ವಾಮಿ, ಖಜಾಂಚಿ ನಾರಾಯಣ ಲೋಲಪ್ಪ, ಸದಸ್ಯರಾದ ರಾಜು, ಮಹದೇವ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.