ADVERTISEMENT

ಪ್ರತಿಭಟನೆ ಸಂವಿಧಾನಬದ್ಧ ಹಕ್ಕು, ರಾಹುಲ್‌, ಪ್ರಿಯಾಂಕಾ ಬಿಡುಗಡೆ ಮಾಡಿ: ದೇವೇಗೌಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಅಕ್ಟೋಬರ್ 2020, 12:17 IST
Last Updated 1 ಅಕ್ಟೋಬರ್ 2020, 12:17 IST
ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ
ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ    

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ಗುರುವಾರ ಹತ್ರಾಸ್‌ಗೆ ಹೊರಟಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯನ್ನು ತಡೆದು, ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸರ ನಡೆದ ಕುರಿತು ಟ್ವೀಟ್‌ ಮಾಡಿರುವ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಸರ್ಕಾರ ಎಚ್ಚರಿಕೆ ಮತ್ತು ಕಾಳಜಿಯಿಂದ ನೋಡಿಕೊಳ್ಳಬೇಕು. ಒಂದು ಕಾರಣಕ್ಕಾಗಿ ಅವರು ಹೋರಾಡುತ್ತಿದ್ದಾರೆ. ಪ್ರತಿಭಟನೆ ಸಾಂವಿಧಾನಿಕ ಹಕ್ಕು. ಅವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಒತ್ತಾಯಿಸಿದ್ದಾರೆ.

ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಸೇರಿದಂತೆ ನೂರಾರು ಕಾರ್ಯಕರ್ತರೊಂದಿಗೆ ಹತ್ರಾಸ್‌ಗೆ ತೆರಳುತ್ತಿದ್ದ ರಾಹುಲ್ ಗಾಂಧಿಯವರ ವಾಹನಗಳನ್ನು ಪೊಲೀಸರು ಗ್ರೇಟರ್‌ ನಾಯ್ಡಾ ಬಳಿ ಪರಿಚೌಕದಲ್ಲಿ ತಡೆದು ವಶಕ್ಕೆ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.