ಬೆಂಗಳೂರು: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಪರಿಶಿಷ್ಟ ಜಾತಿಗಳನ್ನು ಒಳಮೀಸಲಾತಿ ಹೆಸರಿನಲ್ಲಿ ವರ್ಗೀಕರಿಸಬಾರದು. ಸಾರ್ವಜನಿಕ ಚರ್ಚೆಗೆ ಒಳಪಡಿಸದೇ ಸಂಪುಟ ಉಪ ಸಮಿತಿಯು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಒತ್ತಾಯಿಸಿದೆ.
ಗೊಂದಲ, ಅಸ್ಪಷ್ಟತೆ, ಅವೈಜ್ಞಾನಿಕ, ಅಸಂವಿಧಾನಿಕ ಅಂಶಗಳನ್ನು ಒಳಗೊಂಡ ವರದಿಯನ್ನು ಆಧಾರವಾಗಿ ಪರಿಗಣಿಸದೇ ಕಾನೂನು ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಪುಟ ಉಪ ಸಮಿತಿಯೇ ಸ್ವಯಂ ಆಗಿ ಪರಿಶಿಷ್ಟ ಜಾತಿಗಳ ವರ್ಗೀಕರಣ ಮಾಡಲು ಕಾರ್ಯಸಾಧು ಶಿಫಾರಸು ಮಾಡಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.
ಈ ಬೇಡಿಕೆ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲು ಜ.10ಕ್ಕೆ ಬೆಂಗಳೂರಿನಲ್ಲಿ 10 ಲಕ್ಷ ಜನರನ್ನು ಸೇರಿಸಿ ಪ್ರತಿಭಟನೆ ನಡೆಸಲು ಭೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.