ADVERTISEMENT

ಬಂದ್‌ಗೆ ಬೆಂಬಲಿಸಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 19:28 IST
Last Updated 7 ಡಿಸೆಂಬರ್ 2020, 19:28 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್   

ಬೆಂಗಳೂರು: ‘ರೈತರು ಕರೆ ನೀಡಿರುವ ಭಾರತ್ ಬಂದ್‌ ಯಶಸ್ವಿಗೊಳಿಸುವಂತೆ ಜಿಲ್ಲೆ, ತಾಲ್ಲೂಕು, ಬ್ಲಾಕ್ ಮಟ್ಟದ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ವಿಧಾನಸೌಧದ ಆವರಣದಲ್ಲಿಯೂ ಪ್ರತಿಭಟನೆ ನಡೆ ಸುತ್ತೇವೆ. ಎಲ್ಲಿಯೂ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಸೂಚಿಸಲಾಗಿದೆ’ ಎಂದರು.

‘ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ಹಲವು ಮಸೂದೆಗಳನ್ನು ಮಂಡಿಸಲು ರಾಜ್ಯ ಸರ್ಕಾರ ಹೊರಟಿದೆ. ಗೋ ಹತ್ಯೆ ನಿಷೇಧ ಕಾಯ್ದೆ ವಿರುದ್ಧದ ಹೋರಾಟಕ್ಕೆ ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ’ ಎಂದು ವಿವರಿಸಿದರು.

ADVERTISEMENT

ರೈತರಿಂದ ಸಹಿ ಸಂಗ್ರಹ: ‘ರಾಜ್ಯದಲ್ಲಿ 2.8 ಕೋಟಿ ರೈತರಿಂದ ಸಹಿ ಸಂಗ್ರಹಿಸಿದ್ದೇವೆ. ಇದನ್ನು ಎಐಸಿಸಿ ವರಿಷ್ಠರಿಗೆ ಕಳುಹಿಸಿ ಕೊಡುತ್ತೇವೆ. ಇದನ್ನು ಅವರು ರಾಷ್ಟ್ರಪತಿಗೆ ತಲುಪಿಸುವರು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.