ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿಸಬೇಕು ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬಂದ್ ಮಾಡಲಾಗಿದೆ.
ಮುಂಜಾನೆಯಿಂದಲೇ ಕೆಲವು ಸಂಘಟನೆಗಳವರು ಹಳೆಯ ಟೈರುಗಳಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಿಗೆ ಓಡಾಡಲು ಅವಕಾಶ ಕೊಟ್ಟಿಲ್ಲ. ಬಂದ್‌ಗೆ 36 ಸಂಘಟನೆಗಳು ಬೆಂಬಲ ನೀಡಿವೆ. ಅಂಗಡಿಗಳು ತೆರೆದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.