ADVERTISEMENT

ಪಿಎಸ್‌ಐ ಮರುಪರೀಕ್ಷೆ: 17ಕ್ಕೆ ಪ್ರವೇಶಪತ್ರ ಲಭ್ಯ

​ಪ್ರಜಾವಾಣಿ ವಾರ್ತೆ
Published 16 ಜನವರಿ 2024, 16:18 IST
Last Updated 16 ಜನವರಿ 2024, 16:18 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಪಿಎಸ್ಐ ನೇಮಕಾತಿ ಮರುಪರೀಕ್ಷೆ ಜ.23ರಂದು ನಡೆಯಲಿದ್ದು, ಅಭ್ಯರ್ಥಿಗಳು ಜ.17ರಂದು ಬೆಳಿಗ್ಗೆ 11ರಿಂದ ಪ್ರವೇಶಪತ್ರ ಡೌನ್ಲೋಡ್‌ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಪ್ರಾಧಿಕಾರದ ಜಾಲತಾಣ http://kea.kar.nic.in ನಲ್ಲಿ ನಿಗದಿತ ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು. ಬಳಿಕ ಆಧಾರ್‌ ಸಂಖ್ಯೆ ಮತ್ತು ಹೆಸರು ನಮೂದಿಸಿ ಪ್ರವೇಶ ಪತ್ರ ಪಡೆಯಬಹುದು. ಪರೀಕ್ಷೆ 23ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ವಸ್ತ್ರಸಂಹಿತೆ ಸೇರಿದಂತೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಾಧಿಕಾರ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.